ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಇದೇ ಮೇ ಅಂತ್ಯಕ್ಕೆ ವಯೋನಿವೃತ್ತಿ ಹೊಂದುತ್ತಿರುವ
ಕೆ. ಕೆ. ಚವ್ಹಾಣ್ ಅವರಿಗೆ ಶನಿವಾರ (ಮೇ 30)ರಂದು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
