ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು.
ಪ್ರವರ್ಗ-೧, ಎಸ್.ಸಿ & ಎಸ್.ಟಿ. ೨.೫೦ ಲಕ್ಷದೊಳಗಿರಬೇಕು. ಪ್ರವರ್ಗ-೨ಎ, ೨ಬಿ, ೩ಎ, ೩ಬಿ- ರೂ. ೧.೦೦ ಲಕ್ಷದೊಳಗಿರಬೇಕು.
ಆಸಕ್ತರು ವೆಬ್ ಸೈಟ್ https://shp.karnataka.gov.in/bcwdನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ ಲೈನ್ ಅರ್ಜಿ ಸಲ್ಲಿಕೆಗೆ ಜೂ. ೧೫ ಕೊನೆ ದಿನ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ : https://bcwd.karnataka.gov.in/ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದೆ.
