ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದಲ್ಲಿ ಭೂಮಿಕಾ ವಿದ್ಯಾಸಂಸ್ಥೆಯಿಂದ ರವಿವಾರ ಆಯೋಜಿಸಲಾಗಿದ್ದ ಪ್ರತಿಭಾ ಪರೀಕ್ಷೆಯಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಭೂಮಿಕಾ ರೆಸಿಡೆನ್ಸಿಯಲ್ ಸ್ಕೂಲ್‌ನ ಆವರಣದಲ್ಲಿ ಮೂರರಿಂದ ಹತ್ತನೇ ತರಗತಿಯ ಕನ್ನಡ ಹಾಗೂ ಇಂಗ್ಲಿಷ್ ಮಾದ್ಯಮದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಿ ಪ್ರಥಮಸ್ಥಾನ ಪಡೆದ ಪ್ರತೀ ತರಗತಿಯ ವಿದ್ಯಾರ್ಥಿಗಳಿಗೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರರಿಂದ ಉಚಿತ ಸೈಕಲ್ ಹಾಗೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಪ್ರತೀ ತರಗತಿಯ ತಲಾ ಹತ್ತು ವಿದ್ಯಾರ್ಥಿಗಳಿಗೆ ಒಟ್ಟು ಮೂವತ್ತೆರಡು ಲಕ್ಷ ಐವತ್ತು ಸಾವಿರ ರೂ.ಗಳ ಬಹುಮಾನ ಹಾಗೂ ಶಿಷ್ಯವೇತನ ನೀಡಲಾಗುವುದೆಂದು ಸಂಸ್ಥೆಯ ಸಂಸ್ಥಾಪಕ ಮುತ್ತು ಢವಳೇಶ್ವರ ಘೊಷಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಧರ್ಮಪತ್ನಿ ಕವಿತಾ ಸಿದ್ದು ಕೊಣ್ಣೂರ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುವ ಸೈಕಲ್‌ಗಳನ್ನು ಅನಾವರಣಗೊಳಿಸಿದರು.

