ಉದಯರಶ್ಮಿ ದಿನಪತ್ರಿಕೆ
ಅಥಣಿ: ಸರ್ಕಾರಿ ಶಾಲೆಗೆ ನಮ್ಮ ಮಕ್ಕಳನ್ನು ಸೇರಿಸುವುದು ನಮ್ಮ ಜವಾಬ್ದಾರಿ ಎಂಬ ಧ್ಯೇಯದೊಂದಿಗೆ ಎಲ್ಲ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ ಹೇಳಿದರು.
ಅವರು ಪಟ್ಟಣದ ವಿಕ್ರಮಪೂರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ,
ಈ ಶಾಲೆಯಲ್ಲಿ ಎಲ್ ಕೆಜಿ, ಯುಕೆಜಿ, ಯಿಂದ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿದ್ದು 5 ನೇ ತರಗತಿಯಿಂದ ಇಂಗ್ಲಿಷ್ ಭಾಷೆಯಲ್ಲಿದ್ದು ಅದೇ ರೀತಿ 1ನೇ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಬೋಧನೆ ಇದ್ದು ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ಗ್ರಂಥಾಲಯ ಉಚಿತ ಆರೋಗ್ಯ ಸೇವೆ ಉಚಿತ ಪಠ್ಯಪುಸ್ತಕ ಸಮವಸ್ತ್ರ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಮ್ ಆರ್ ಮುಂಜೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿ ತಿಂಗಳು ಪಾಲಕ ಹಾಗೂ ಶಿಕ್ಷಕರ ಸಭೆ ಮಕ್ಕಳ ಕಲಿಕಾ ಪ್ರಗತಿಯ ನಿರಂತರ ಮೌಲ್ಯಮಾಪನ ಎಸ್ ಡಿ ಎಂ ಸಿ ಸಭೆ ಆಯೋಜಿಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾಜೆಕ್ಟ್ ಆಧಾರಿತ ಕಲಿಕೆ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಹೇಳಿದರು.
ಎಸ್ ಡಿಎಂಸಿ ಅಧ್ಯಕ್ಷ ರಾಕೇಶ ಮೈಗೂರ ಹಾಗೂ ಪುರಸಭೆ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ರಾಜಶೇಖರ ಗುಡೊಡಗಿ,ರಿಯಾಜ್ ಸನದಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಕ್ಷೇತ್ರ ಸಮನ್ವಯಾಧಿಕಾರಿ ಗೌಡಪ್ಪ ಖೋತ,ಬಿಸಿ ಊಟ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ನಾಮದಾರ, ಶಾಲೆಯ ಮುಖ್ಯೋಪಾಧ್ಯಾಯ ಡಿ ಸ್ ಬಸರಗಿ,ಶಿಕ್ಷಕರಾದ ಡಿ ಎಸ್ ಗುಡದಿನ್ನಿ,ವಿ ಎಸ್ ವಾಘಮೊಡೆ,ಡಿ ಎ ಬರಡಗಿ, ಎಸ್ ಎಸ್ ಮುಗಳಖೋಡ,ಜಿ ಎನ್ ಕುಂಬಾರ,ಎಫಎಮ್ ಖೋರ್ಬು, ಲಕ್ಷ್ಮಿ ನೀಡೊಣಿ,
ಎಸ್ ಡಿ ಎಮ್ ಸಿ ಸದಸ್ಯರಾದ ರಿಯಾಜ್ ಸನದಿ, ನಾಗವ್ವ ಸುರವಿ,ಬಿ ಬಿ ಆಯಿಶಾ ಮಮದಾಪೂರ, ರೇಣುಕಾ ಬಿರಡಿ, ಸೇರಿದಂತೆ ಪಾಲಕರು ವಿದ್ಯಾರ್ಥಿಗಳು ಭಾಗವಹಿಸಿದರು.

