ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಜೂನ್ 6 ರಂದು ಶನಿವಾರ ಅಪ್ರೆಂಟಿಸ್‌ಶಿಪ್‌ಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.
ಶನಿವಾರ ಬೆಳಿಗ್ಗೆ 9.30 ಗಂಟೆಗೆ ಟೋಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ (ಟಿಐಇಐ) ಅವರು ಈ ಸಂದರ್ಶನ ನಡೆಸಲಿದ್ದು, ಐಟಿಐ ಪಾಸಾದ ಮತ್ತು ಐಟಿಐ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ
ವಿಜಯಪುರ ಜಿಲ್ಲೆಯಲ್ಲಿ ಬರುವ ಎಲ್ಲ ಐಟಿಐ ತರಬೇತಿದಾರರು ಎರಡು ಭಾವಚಿತ್ರ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಈ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ತರಬೇತಿ ಕೇಂದ್ರದ ಪ್ರಾಚಾರ್ಯ ಎಂ. ಡಿ. ಪಡಸಲಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964658059 ಮತ್ತು 9916853605 ಸಂಪರ್ಕಿಸಬಹುದಾಗಿದೆ.
