ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಾಜ್ಯದ ದಲಿತ ಸಮುದಾಯದ ಆಶೋತ್ತರಗಳಿಗೆ ಧ್ವನಿಯಾಗಿರುವ ಮಹಾದೇವಪ್ಪ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ನಾಯಕತ್ವ ಮತ್ತು ಆಡಳಿತ ಅನುಭವವನ್ನು ಪರಿಗಣಿಸಿ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವುದು ಸೂಕ್ತ. “ಸಾಮಾಜಿಕ ನ್ಯಾಯದ ಪರವಾಗಿ ನಿರಂತರ ಹೋರಾಟ ನಡೆಸಿರುವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಸರ್ಕಾರದಲ್ಲಿ ಇನ್ನಷ್ಟು ಮಹತ್ವದ ಜವಾಬ್ದಾರಿ ನೀಡಬೇಕು ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಮುಖಂಡರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಹಿರಿಯ ದಲಿತ ನಾಯಕರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು. ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ.ಹೆಚ್.ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಇದರಿಂದ ದಲಿತ ಸಮುದಾಯದ ಆಶಯಗಳಿಗೆ ಹೆಚ್ಚಿನ ಬಲ ದೊರೆಯಲಿದೆ ಎಂದು ದಲಿತ ಮುಖಂಡ ರಾಜಶೇಖರ ಕೂಚಬಾಳ ಮನವಿ ಮಾಡಿದ್ದಾರೆ.

