ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸದ್ಯದ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯಿಂದಾಗಿ ನೂತನ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಮಂತ್ರಿ ಮಂಡಲ ವಿಸ್ತಾರವಾಗಲಿದೆ. ಉಪಮುಖ್ಯಮಂತ್ರಿಗಳ ಸ್ಥಾನಗಳು ಭರ್ತಿಯಾಗಲಿವೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಒಂದೊಮ್ಮೆ ಉಪ ಮುಖ್ಯಮಂತ್ರಿಗಳ ಸ್ಥಾನ ನೀಡುವುದೇ ಆದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮಾದ್ಯತೆ ಕೊಡಬೇಕು. ಅದರಲ್ಲೂ ವಿಶೇಷವಾಗಿ ಹಲವಾರು ಬಾರಿ ಶಾಸಕರಾಗಿ, ವಿವಿಧ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸೈ ಎನಿಸಿಕೊಂಡದ್ದಲ್ಲದೇ ಸಜ್ಜನ ರಾಜಕಾರಣಿ ಎಂದೇ ಪ್ರಚಲಿತವಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಜವಳಿ ಮತ್ತು ಸಕ್ಕರೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಬಸವನ ಬಾಗೇವಾಡಿ ಕ್ಷೇತ್ರದ ಶಿವಾನಂದ ಪಾಟೀಲರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ನೀಡಬೇಕೆಂದು ಸಿಂದಗಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸಿಂದಗಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಾಂತವೀರ ಬಿರಾದಾರ ಸರಕಾರಕ್ಕೆ ಆಗ್ರಹಿಸಿದ್ದಾರೆ.

