ಉದಯರಶ್ಮಿ ದಿನಪತ್ರಿಕೆ
ನಿಡಗುಂದಿ: ಇಟಗಿ ಗ್ರಾಮದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ನಿಡಗುಂದಿ ತಾಲೂಕು ನೂತನ ಅಧ್ಯಕ್ಷರಾಗಿ ನಂದು ಮಾಗಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಉಮೇಶ ವಾಲೀಕಾರ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿ ಆದೇಶ ಪತ್ರ ನೀಡಿ ಮಾತನಾಡಿದ ಅವರು, “ಸಂಘದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ, ಸಂಘಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕತೆಯಿಂದ ಸಂಘಟನೆ ಮುನ್ನಡೆಸಬೇಕು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಸೂಚಿಸಿದರು.

