ಇಂಡಿ: ತಾಲ್ಲೂಕಿನ ಹಿರೇಮಸಳಿ ಗ್ರಾಮದ ಇಂದಿರಾನಗರದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಚರಂಡಿ ವ್ಯವಸ್ಥೆಯಿಲ್ಲ, ಶೌಚಾಲಯವಿಲ್ಲ, ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಹೀಗೆ ಮೂಲಭೂತ ಸೌಲಭ್ಯಗಳಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಾಕಷ್ಟು ಸಲ ಮನವಿ ಪತ್ರ ಸಲ್ಲಿಸಿದರೂ ಕೂಡಾ ಯಾವದೇ ಪ್ರಯೋಜನವಾಗಿಲ್ಲ ಎಂದು ಅಲ್ಲಿಯ ನಿವಾಸಿಗಳಾದ ಸೈಫನ್ ಚಟ್ಟರಕಿ, ರಸೂಲ ನಾಟೀಕಾರ, ಶಾಬುದ್ದೀನ ಜೇಟಗಿ, ಶ್ರೀಶೈಲ ತಳವಾರ, ಅನೀಲ ಕಪಾಲಿ ಹಾಗೂ ಕೆಆರೆಸ್ ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸದಿದ್ರೆ ಶೀಘ್ರದಲ್ಲಿಯೇ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Related Posts
Add A Comment