Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
(ರಾಜ್ಯ ) ಜಿಲ್ಲೆ

ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ | ಜಾಗೃತಿ ಜಾಥಾ | ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಅರವಿಂದ್ ಹಾಗರಗಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವಜನತೆ ದುಶ್ಚಟಗಳಿಂದ ದೂರವಿರಬೇಕು, ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಅರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶದ ಭವಿಷ್ಯ. ಯುವಜನತೆ ಯಾವುದೇ ಕಾರಣಕ್ಕೂ ಧೂಮಪಾನ, ತಂಬಾಕು ಸೇವನೆಯಂತಹ ಮಾರಕ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಜೀವನವನ್ನು ಶಿಸ್ತುಬದ್ಧವಾಗಿ ಮತ್ತು ಅಚ್ಚುಕಟ್ಟಾಗಿ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಆಸ್ಪತ್ರೆಯ ಡಾ.ಎಂ.ಟಿ.ಆರ್. ಕೋತ್ವಾಲ್ ಅವರು ವಿಶೇಷ ಉಪನ್ಯಾಸ ನೀಡಿ, ಕ್ಯಾನ್ಸರ್ ಮಹಾಮಾರಿಯಾಗಿ ಬೆಳೆಯುವ ಮುನ್ನವೇ ನಾವು ಜಾಗರೂಕರಾಗಿರಬೇಕು. ಆರಂಭಿಕ ಹಂತದಲ್ಲೇ ತಪಾಸಣೆ ಮತ್ತು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಗತ್ಯ ಎಂದರು.
ಮನೋವೈದ್ಯರಾದ ಡಾ. ಮಂಜುನಾಥ್ ಮಸಳಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸದಾ ಧನಾತ್ಮಕ ಕಲಿಕಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್. ಆರ್. ಭಗವಾನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ. ಎಂ. ಕೋಳೂರು, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರು ಡಾ. ಪ್ರಕಾಶ ಚವ್ಹಾಣ ಹಾಗೂ ಶ್ರೀಕಾಂತ್ ಪೂಜಾರ್ ಅವರು ಉಪಸ್ಥಿತರಿದ್ದರು.

ತಂಬಾಕು ಮುಕ್ತ ಸಮಾಜಕ್ಕೆ ಪ್ರತಿಜ್ಞಾವಿಧಿ ಸ್ವೀಕಾರ
ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ವಿಭಾಗದ ಪ್ರತಿನಿಧಿಯಾಗಿ ಆಗಮಿಸಿದ್ದ ಗುರುರಾಜ್ ಕುಲಕರ್ಣಿ ಅವರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುವಂತೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಜಾಗೃತಿ ಜಾಥಾಕ್ಕೆ ಚಾಲನೆ

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾಕ್ಕೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಖಾದರ್ ಸಾಬ್ ಹುಸೇನ್ ಸಾಬ್ ಬೆನಕಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ್ ಹಾಗರಗಿ ಮತ್ತು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿಗಳಾದ ಡಾ. ರಾಜೇಶ್ವರಿ ಗೋಲಗೇರಿ ಅವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು. ಈ ಜಾಗೃತಿ ಜಾಥಾವು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ, ಗಾಂಧಿ ಚೌಕ್ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದುದ್ದಕ್ಕೂ ವಿದ್ಯಾರ್ಥಿಗಳು ತಂಬಾಕು ವಿರೋಧಿ ಘೋಷಣೆಗಳಿರುವ ಫಲಕಗಳನ್ನು ಪ್ರದರ್ಶಿಸಿ ಸಾರ್ವಜನಿಕರ ಗಮನ ಸೆಳೆದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
  • ವಿಠ್ಠಲ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಮುಲ್ಲಾ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.