Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
(ರಾಜ್ಯ ) ಜಿಲ್ಲೆ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ನಿಮಿತ್ತ ಸೈಕ್ಲಿಂಗ್ ಜಾಥಾ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸದೃಢ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಸೈಕಲ್ ಓಡಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ರಾಜ್ಯ ಸೈಕ್ಲಿಂಗ್ ಅಸೋಸಿಯೇನ್ ಅಧ್ಯಕ್ಷರಾದ ರಾಜು ಬಿರಾದಾರ ಹೇಳಿದರು.
ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಶನ್ ಹಾಗೂ ವಿಶಾಲ್ ಸೈಕಲ್ ಮಹಾಲ್ ಸಹಯೋಗದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕ್ಲಿಂಗ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
೧೮೬೮ರಲ್ಲಿ ಸೈಕ್ಲಿಂಗ್ ಕ್ರೀಡೆಯಾಗಿ ಪರಿವರ್ತನೆಯಾಗಿ ಭಾರತದೇಶಕ್ಕೆ ೧೯೩೮ ರಲ್ಲಿ ಪಾದಾರ್ಪಣೆಯಾಯಿತು. ಬಳಿಕ ೭೦ ರ ದಶಕದಲ್ಲಿ ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಸೈಕ್ಲಿಂಗ್ ಕ್ರೀಡೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಕ್ಕಿತು. ಇದರಿಂದಾಗಿ ಅವಿಭಜಿತ ವಿಜಯಪುರ ಜಿಲ್ಲೆಯ ಸೈಕ್ಲಿಸ್ಟ್ಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿ ಬೆಳಗಿಸಿದ್ದಾರೆ.
ಈ ಕ್ರೀಡೆ ಕೇವಲ ಸೈಕ್ಲಿಸ್ಟ್ಗಳಿಗೆ ಮಾತ್ರವಲ್ಲ. ಜನಸಾಮಾನ್ಯರು ಸೈಕಲ್ ನಿತ್ಯ ಬಳಸಬಹುದಾಗಿದೆ. ನಿತ್ಯ ಸೈಕಲ್ ಸಂಚಾರ ಮಾಡುವುದರಿಂದ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ನಿತ್ಯವೂ ಸೈಕಲ್ ಸಂಚಾರ ಮಾಡುವುದರಿಂದ ಈಗಿನ ಬಿಪಿ ಮತ್ತು ಸಕ್ಕರೆ ಕಾಯಿಲೆಗಳಿಂದ ದೂರವಿದ್ದು, ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಮಾತನಾಡಿ, ಇತರೇ ಕ್ರೀಡೆಗಳಿಗಿಂತ ಇಂದಿನ ದಿನಗಳಲ್ಲಿ ಸೈಕ್ಲಿಂಗ್ ಕ್ರೀಡೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸೈಕ್ಲಿಂಗ್ ಕ್ರೀಡೆಯಲ್ಲಿ ರಾಷ್ಟç ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ, ಜಿಲ್ಲೆಯ ಕೀರ್ತಿ ಹೆಚ್ಚಿಸಿ, ಸದೃಢ ಆರೋಗ್ಯ ಜೀವನ ನಿರ್ವಹಣೆಗೆ ಈ ಕ್ರೀಡೆ ಅತ್ಯುಪಯುಕ್ತ ಎಂದರು.
ಜಾಥಾದಲ್ಲಿ ಆರ್‌ಕೆಎಂ ಕಾಲೇಜಿನ ವಿದ್ಯಾರ್ಥಿಗಳು, ಸೈಕ್ಲಿಂಗ್ ಕ್ರೀಡಾ ವಸತಿ ಶಾಲೆ, ವಿಸಿಜಿ ಗ್ರುಪ್, ರೈಲ್ವೆ, ಪೊಲೀಸ್ ಇಲಾಖೆ ಕ್ರೀಡಾಪಟುಗಳು,ವಿಜಯಪುರ ಸೈಕ್ಲಿಂಗ್ ಗ್ರುಪ್‌ನ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಯದರ್ಶಿ ಸೋಮಶೇಖರ ಸ್ವಾಮಿ, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್ ಪದಾಧಿಕಾರಿಗಳಾದ ಗಂಗಾಧರ ಪತ್ತಾರ, ಸಂಜೀವ ಪಡತರೆ, ಸಂತೋಷ ಕುಮಾರ ಕತಕನಹಳ್ಳಿ, ಶ್ರೀಕಾಂತ ಮಠ, ಸೋಮಶೇಖರ ಮಠದ, ಲಕ್ಷ್ಮಣ ತೇರದಾಳ, ನಿಜಪ್ಪ ಎಂಟೆತ್ತು, ತರಬೇತುದಾರರಾದ ಅಲ್ಕಾ ಪಡತರೆ, ರಮೇಶ ರಾಠೋಡ, ಪೊಲೀಸ್‌ತಂಡದ ಆಸೀಫ್ ಅತ್ತಾರ ಹಾಗೂ ಇತರೇ ಸೈಕ್ಲಿಸ್ಟ್ಗಳು ಉಪಸ್ಥಿತರಿದ್ದರು.

ಸೈಕ್ಲಿಂಗ್ ಜಾಥಾಕ್ಕೆ ಚಾಲನೆ

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಸೈಕ್ಲಿಂಗ್ ಜಾಥಾಕ್ಕೆ ರಾಜ್ಯ ಸೈಕ್ಲಿಂಗ್ ಹಸಿರು ನಿಶಾನೆ ತೋರಿಸುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ, ಗೋಲಗುಂಬಜ್, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಶಿವಾಜಿ ವೃತ್ತ, ಇಬ್ರಾಹಿಂರೋಜಾ, ವಾಟರ್‌ಟ್ಯಾಂಕ್ ಮಾರ್ಗವಾಗಿ ಬಿಎಲ್‌ಡಿಇ ಕ್ಯಾಂಪಸ್ ತಲುಪಿತು. ಬಳಿಕ ಅಲ್ಲಿಂದ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ, ಪುನಃ ಗಾಂಧಿವೃತ್ತ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ

ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
  • ವಿಠ್ಠಲ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಮುಲ್ಲಾ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.