ಕೊಲ್ಹಾರ: ದೇಶದ ರಕ್ಷಣೆಯಲ್ಲಿ ನಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ನೆನಪಿನಲ್ಲಿ ನನ್ನ ಮಣ್ಣು ನನ್ನ ದೇಶ ಕಳಸ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಗಳು ಆರ್ ಎಸ್ ಪಾಟೀಲ್ ಹೇಳಿದರು.
ಪಟ್ಟಣದ ತಾಲ್ಲೂಕ ಪಂಚಾಯಿತಿ ಆವರಣದಲ್ಲಿ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ, ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದ ನಿಮಿತ್ತ ಪ್ರತಿ ಗ್ರಾಮ ಪಂಚಾಯತಿಯಿಂದ ಮಣ್ಣು ಸೇರಿ ವಿವಿಧ ಕಾರ್ಯಕ್ರಮಗಳನ್ನು ತಾಲೂಕು ಮಟ್ಟದಲ್ಲಿ ಹಾಗೂ ಗ್ರಾ.ಪಂ.ಮಟ್ಟದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆಯವರ ನಿರ್ದೇಶನದಂತೆ ಹಾಗೂ ತಾಲೂಕ ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಎಫ್.ಹೆಚ್.ಪಠಾಣರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಮಯದಲ್ಲಿ ತಾಲೂಕು ಕಂದಾಯ ಇಲಾಖೆಯ ಕೃಷ್ಣಾ ಗುಡೂರ, ಕೃಷಿ ಇಲಾಖೆಯ ಅಧಿಕಾರಿ ಪೂರೋಹಿತ, ಶಿಶು ಅಭಿವೃದ್ಧಿ ಅಧಿಕಾರಿಗಳು, ಅಂಚೆ ಕಛೇರಿಯ ಇಲಾಖೆಯ ಅಧಿಕಾರಿಗಳು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ.ವಿಶೇಷ ನಿರ್ವಾಹಕರು, ತಾ.ಪಂ.ಸಿಬ್ಬಂದಿಗಳು, ಗ್ರಾ.ಪಂ ಕಾರ್ಯದರ್ಶಿಯವರು, ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘದ ಸದ್ಯಸರು, ಪಶು ಸಖಿಯರು, ಕೃಷಿ ಸಖಿಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಇತರರು ಇದ್ದರು.
Related Posts
Add A Comment