Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
(ರಾಜ್ಯ ) ಜಿಲ್ಲೆ

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್.ಡಿ.ಕೋಟೆ: ಮಣ್ಣು, ನೀರು, ರೈತ ಉಳಿಯಬೇಕು. ಮನುಷ್ಯನಿಗೆ ಉತ್ತಮ ಆರೋಗ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಿರಿಧಾನ್ಯ ಪೌಡರ್ ನ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದೆವೆ ಎಂದು ಉದ್ಯಮಿ ಮಿಲ್ ನಾಗರಾಜ್ ಹೇಳಿದರು.
ತಾಲೂಕಿನ ಪಡುಕೋಟೆಯಲ್ಲಿ (ಇಂದಿರಾನಗರ) ಸಮತಾ ಟ್ರಸ್ಟ್ (ರಿ), ನಂಬಿಕೆ ಫುಡ್ ಪ್ರಾಡಕ್ಟ್ ಪ್ರೈವೇಟ್ (ಲಿ), ಸ್ವಾರಲಯ ಮ್ಯೂಸಿಕಲ್ ಟ್ರಸ್ಟ್, ಗಾನವಿ ಮೆಡಿಕಲ್ ಅಂಡ್ ಜನರಲ್ ಇಂದಿರಾನಗರ ಸಂಯುಕ್ತಾಶ್ರಯದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ಹಾಗೂ ನಂಬಿಕೆ ಸಿರಿಧಾನ್ಯ ಪೌಡರ್ (ಬಾದಾಮಿ ಹಾಲು) ಮಹತ್ವವನ್ನು ಕುರಿತು ಮಾತನಾಡಿದರು.
ಮನುಷ್ಯ ದಿನನಿತ್ಯ ಸೇವಿಸುತ್ತಿರುವ ಆಹಾರ ವಿಷಪೂರಿತವಾಗಿದ್ದು ಚಿಕ್ಕ ವಯಸ್ಸಿಗೆ ಹಲವಾರು ರೋಗಗಳು ಬರುತ್ತಿವೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಆಸೆಗಾಗಿ ಬಿತ್ತನೆ ಬೀಜಗಳಿಗೆ ರೈತರು ರಾಸಾಯನಿಕ ಗೊಬ್ಬರ ಹಾಗೂ ಔಷಧಿಗಳನ್ನು ಸಿಂಪಡಿಸುತ್ತಿದ್ದಾರೆ. ಆದರೆ ನಮ್ಮ ನಂಬಿಕೆ ಸಿರಿಧಾನ್ಯ ಪೌಡರ್ ನಲ್ಲಿ 9 ತರಹದ ನೈಸರ್ಗಿಕ ಧಾನ್ಯಗಳನ್ನ ಬಳಸಿ ಪೌಡರ್ ಅನ್ನು ತಯಾರಿಸುತ್ತಿದ್ದು ಇದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದನ್ನ ಬಳಸಿ ಎಲ್ಲರೂ ಆರೋಗ್ಯವನ್ನ ಚೆನ್ನಾಗಿ ಇಟ್ಟಿಕೊಳ್ಳಿ ಎಂದು ತಿಳಿಸಿದರು.
ಡಾ. ಪುನೀತ್ ರಾಜಕುಮಾರ್ ಮರಣ ಹೊಂದಿ ಇಂದಿಗೆ ನಾಲ್ಕು ವರ್ಷ ಕಳೆದಿದೆ.ಪ್ರತಿ ತಿಂಗಳ 29ನೇ ತಾರೀಕು ಸಿರಿಧಾನ್ಯ ಪೌಡರ್ ಹಾಲನ್ನು ವಿತರಣೆ ಮಾಡುವುದರ ಮೂಲಕ ಸಿರಿಧಾನ್ಯ ಬಳಕೆಯ ಮಹತ್ವ ಹಾಗೂ ಸೇವೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜ್ ಮಾತನಾಡಿ, ನಮ್ಮ ಮೈಸೂರಿನ 24ನೇ ದೊರೆ ನಾಲ್ವಡಿಯವರು. ಕನ್ನಂಬಾಡಿ ಕಟ್ಟೆ, ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ನಿರ್ಮಾಣ, ರೈಲು ಮಾರ್ಗ, ವಿದ್ಯುತ್, ಸಾಬೂನು ತಯಾರಿಕಾ ಘಟಕ ಸ್ಥಾಪನೆ ಮಾಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಸಲ್ಲುತ್ತದೆ. ರೈತರಿಗೆ ಬಡವರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಆಡಳಿತವನ್ನು ಕೊಟ್ಟ ಧೀಮಂತ ನಾಯಕ ಇಂತಹ ನಾಯಕರ ಜನ್ಮ ದಿನದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯದ ದೃಷ್ಟಿಯಿಂದ 10 ವರ್ಷದಿಂದ ಮಿಲ್ ನಾಗರಾಜು ಅವರು ಪ್ರಕೃತಿಯಲ್ಲಿ ಬೆಳೆಯುವ ಸಿರಿಧಾನ್ಯಗಳ ಮೂಲಕ ಬಾದಾಮಿ ಪೌಡರ್ ತಯಾರಿಸಿದ್ದು ಎಲ್ಲರೂ ಟೀ, ಕಾಫಿ,ಸಾರಾಯಿ ಕುಡಿಯೋ ಬದಲು ಬಾದಾಮಿ ಪೌಡರ್ ನ ಹಾಲನ್ನು ಕುಡಿದು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಎಂದು ಸಲಹೆ ಹೇಳಿದರು.
ಎಚ್.ಡಿ ಕೋಟೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ಪ್ರವೀಣ್ ಗೌಡರ್, ಸಮತಾ ಟ್ರಸ್ಟ್ ಅಧ್ಯಕ್ಷ ಮಲಾರ ರವೀಂದ್ರ, ಸ್ವರಾಲಯ ಮ್ಯೂಸಿಕಲ್ ಟ್ರಸ್ಟ್ ಅಧ್ಯಕ್ಷ ಸಿದ್ದರಾಜು, ಐಡಿಯಾ ವೆಂಕಟೇಶ್, ಭಜರಂಗಿ ವಿನಯ್, ಕುಮಾರಸ್ವಾಮಿ, ನಾಗೇಶ್, ಸೋಮು, ನವೀನ್, ಮರಿಲಿಂಗಯ್ಯ, ಅಶೋಕ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.