Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
(ರಾಜ್ಯ ) ಜಿಲ್ಲೆ

ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ

By No Comments5 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್‌ಐಆರ್ ಪ್ರಕ್ರಿಯೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ಧತೆ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.೯೦ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ೨೦೦೨ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು ಪ್ರಸ್ತುತ ಇರುವ ೨೦೨೫ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ ಎಂದರು.
ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.೯೦ರಷ್ಟು ಮ್ಯಾಪಿಂಗ್ ಆಗಿದೆ ಎಂದರು. ವಿಶೇಷ ಪರಿಷ್ಕರಣೆ ಅಂಗವಾಗಿ ಜೂನ್ ೨೦ ರಿಂದ ೨೯ರವರೆಗೆ ಪೂರ್ವಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯಗಳು ನಡೆಯಲಿವೆ. ಜೂನ್ ೩೦ ರಿಂದ ಜುಲೈ ೨೯ ರವರೆಗೆ ಬಿ.ಎಲ್.ಒ.ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ತದನಂತರ ಆಗಸ್ಟ್ ೫ ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಆಗಸ್ಟ್ ೫ರಿಂದ ಅಕ್ಟೋಬರ್ ೩ರವರೆಗೆ ನೋಟಿಸ್ ಹಂತ ಹಾಗೂ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು ಎಂದರು. ಅಕ್ಟೋಬರ್.೭ ರಂದು ಮತದಾರರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದರು.
೨೦೯೨ ಬಿಎಲ್‌ಒಗಳು: ವಿಜಯಪುರ ಜಿಲ್ಲೆಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತ್ತು ಬಿಎಲ್‌ಒಗಳ ಮೇಲ್ವಿಚಾರಕರ ವಿವರ ಆಯಾ ವಿಧಾನಸಭಾವಾರು ವಿವರ ನೀಡಿದರು. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಒಟ್ಟು ೨೪೬ ಮತಗಟ್ಟೆಗಳಿದ್ದು, ೨೪೬ ಬಿಎಲ್‌ಒಗಳು ಹಾಗೂ ೨೦ ಬಿಎಲ್ ಒಗಳ ಮೇಲೆ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು ೨೫೨ ಮತಗಟ್ಟೆಗಳಿಗೆ ೨೫೨ ಬಿಎಲ್‌ಒಗಳಿದ್ದು, ಅವರಿಗೆ ೨೩ ಜನ ಮೇಲ್ವಿಚಾರಕರಿದ್ದಾರೆ. ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದಲ್ಲಿ ೨೩೧ ಮತಗಟ್ಟೆಗಳಿಗೆ ೨೩೧ ಬಿಎಲ್‌ಒಗಳಿದ್ದು, ೨೧ ಮೇಲ್ವಿಚಾರಕರಿದ್ದಾರೆ. ಬಬಲೇಶ್ವರ ಮತಕ್ಷೇತ್ರದಲ್ಲಿ ಒಟ್ಟು ೨೪೪ ಮತಗಟ್ಟೆಗಳಿದ್ದು, ೨೪೪ ಬಿಎಲ್ ಒಗಳು ಕಾರ್ಯನಿರ್ವಹಿಸಲಿದ್ದು, ಇವರ ಮೇಲೆ ೨೩ ಮೇಲ್ವಿಚಾರಕರಿದ್ದಾರೆ. ವಿಜಯಪುರ ನಗರ ಮತಕ್ಷೇತ್ರದಲ್ಲಿ ಒಟ್ಟು ೨೮೫ ಮತಗಟ್ಟೆಗಳಿದ್ದು, ೨೮೫ ಬಿಎಲ್ ಓಗಳಿಗೆ ೨೮ ಮೇಲ್ವಿಚಾರಕರು ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.ನಾಗಠಾಣ ವಿಧಾನಸಭೆ ಕ್ಷೇತ್ರದಲ್ಲಿ ೨೯೯ ಮತಗಟ್ಟೆಗಳಿದ್ದು,೨೯೯ ಬಿಎಲ್‌ಒಗಳಿಗೆ ೩೦ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು. ಇಂಡಿ ಮತಕ್ಷೇತ್ರದಲ್ಲಿ ೨೬೮ ಮತಗಟ್ಟೆಗಳಿದ್ದು, ೨೬೮ ಬಿಎಲ್‌ಒಗಳು ಹಾಗೂ ೩೩ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಸಿಂದಗಿ ಮತಕ್ಷೇತ್ರದಲ್ಲಿ ಒಟ್ಟು ೨೬೭ ಮತಗಟ್ಟೆಗಳಿದ್ದು, ೨೬೭ ಬಿಎಲ್ ಒಗಳು ಹಾಗೂ ೨೧ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಒಟ್ಟು ೨೦೯೨ ಮತಗಟ್ಟೆಗಳಿಗೆ ೨೦೯೨ ಬಿಎಲ್ ಒಗಳಿದ್ದು, ಅವರ ಮೇಲೆ ೧೯೯ ಜನ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಿಲ್ಲೆಯ ಮತದಾರರ ವಿವರ ಆಯಾ ವಿಧಾನಸಭಾವಾರು: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಒಟ್ಟು ೨೪೬ ಮತಗಟ್ಟೆಗಳಿದ್ದು, ೧,೧,೪೨೫೨ ಗಂಡು, ೧,೧೪,೫೨೭ ಮಹಿಳೆಯರು ಇತರೇ ೩೨ ಸೇರಿ ಒಟ್ಟು ೨,೨೮,೮೧೧ ಮತದಾರರಿದ್ದಾರೆ. ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಒಟ್ಟು ೨೫೨ ಮತಗಟ್ಟೆಗಳ ಸಂಖ್ಯೆಯಿದ್ದು, ೧,೧೭,೪೭೮ ಪುರುಷರು, ೧,೧೩,೮೧೮ ಮಹಿಳೆಯರು ೨೯ ಇತರೇ ಸೇರಿ ಒಟ್ಟು ೨,೩೧,೩೨೫ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಒಟ್ಟು ೨೩೧ ಮತಗಟ್ಟೆಗಳಿದ್ದು, ೧,೧೧,೮೯೧ ಪುರುಷರು, ೧,೧೦,೪೫೬ ಮಹಿಳೆಯರು, ಇತರೇ ೨೨ ಸೇರಿ ಒಟ್ಟು ೨,೨೨,೩೬೯ ಮತದಾರರಿದ್ದಾರೆ. ಬಬಲೇಶ್ವರದಲ್ಲಿ ಒಟ್ಟು ೨೪೪ ಮತಗಟ್ಟೆಗಳಿದ್ದು, ೧,೧೩,೮೦೩ ಪುರುಷರು, ೧,೧೨,೦೨೫ ಮಹಿಳೆಯರು, ಇತರೇ ೧೦ ಸೇರಿ ಒಟ್ಟು ೨,೨೫,೮೩೮ ಮತದಾರರಿದ್ದಾರೆ. ವಿಜಯಪುರ ನಗರ ಮತಕ್ಷೇತ್ರದಲ್ಲಿ ಒಟ್ಟು ೨೮೫ ಮತಗಟ್ಟೆಗಳಿದ್ದು, ೧,೪೩,೦೧೦ ಪುರುಷರು, ೧,೪೯,೦೮೦ ಮಹಿಳೆಯರು, ಇತರೇ ೮೯ ಸೇರಿ ೨,೯೨,೧೭೯ ಮತದಾರರಿದ್ದಾರೆ. ನಾಗಠಾಣದಲ್ಲಿ ೨೯೯ ಮತಗಟ್ಟೆಗಳಿದ್ದು, ೧,೪೨,೧೪೮ ಪುರುಷರು, ೧,೩೭,೦೩೧ ಮಹಿಳೆಯರು, ಇತರೇ ೧೨ ಸೇರಿ ೨,೭೯,೧೯೧ ಮತದಾರರಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ೨೬೮ ಮತಗಟ್ಟೆಗಳಿದ್ದು, ೧,೩೦,೮೬೩ ಪುರುಷರು, ೧,೨೪,೪೫೫ ಮಹಿಳೆಯರು, ಇತರೇ ೨೦ ಸೇರಿ ಒಟ್ಟು ೨,೫೫,೩೩೮ ಮತದಾರರಿದ್ದಾರೆ. ಸಿಂದಗಿ ಮತಕ್ಷೇತ್ರದಲ್ಲಿ ೨೬೭ ಮತಗಟ್ಟೆಗಳಿದ್ದು, ೧,೨೭,೩೬೦ ಪುರುಷರು, ೧,೨೩,೨೯೫ ಮಹಿಳೆಯರು, ಇತರೇ ೩೪ ಸೇರಿ ೨,೫೦,೬೮೯ ಮತದಾರರಿದ್ದಾರೆ.
ಜಿಲ್ಲೆಯ ಒಟ್ಟು ೨೦೯೨ ಮತಗಟ್ಟೆಗಳಿದ್ದು, ೧೦,೦೦,೮೦೫ ಪುರುಷರು, ೯,೮೪,೬೮೭ ಮಹಿಳೆಯರು ಇತರೇ ೨೪೮ ಸೇರಿ ಒಟ್ಟು ೧,೯,೮೫,೭೪೦ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಚುನಾವಣಾ ಆಯೋಗದ hಣಣಠಿs://voಣeಡಿs.eಛಿi.gov.iಟಿ (ಗಿoಣeಡಿs Seಡಿviಛಿe Poಡಿಣಚಿಟ) ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ಇವರ ಅeoಞಚಿಡಿಟಿಚಿಣಚಿಞಚಿ.gov.iಟಿ ಅಂತರ ಜಾಲ ತಾಣ ಸರ್ಚ್ ಮಾಡಿ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಎಸ್ ಐಆರ್-೨೦೨೬ಕ್ಕೆ ಲಾಗಿನ್ ಆಗಿ ಬುಕ್ ಎ ಕಾಲ್ ರಿಕ್ವೆಸ್ಟ್ ವಿತ್ ಬಿಎಲ್ ಒ ಲಾಗಿನ್ ಆಗಿ ಸೈನ್ ಅಪ್ ಮಾಡಬೇಕು. ಬಳಿಕ ಎಸ್‌ಐಆರ್ ೨೦೨೬ರಲ್ಲಿ ನಿಮ್ಮ ಹೆಸರು ಹುಡುಕಿ- ರೋಲ್‌ಗೆ ಹೋಗಿ, ಅಲ್ಲಿ ಎಪಿಕ್ ನಂಬರ್, ಮೊಬೈಲ್ ನಂಬರ್ ಹಾಗೂ ಒಟಿಪಿ ದಾಖಲಿಸಿ, ಆಗ ೨೦೦೨ರ ಮತದಾರರ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯ ಕ್ರಮ ಸಂಖ್ಯೆ ಮತ್ತು ಮತಗಟ್ಟೆ ಸಂಖ್ಯೆ ಮತ್ತು ಹೆಸರು, ಮತಗಟ್ಟೆ ಅಧಿಕಾರಿಯ ಹೆಸರು ಮತ್ತು ಮೊಬೈಲ್ ನಂ. ಮತ್ತು ಮತದಾರರ ನೋಂದಣಾಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆ ಪಡೆಯಬಹುದಾಗಿದೆ. ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಲು ವಿನಂತಿ ದಾಖಲಿಸಿ, ಅವರಿಂದ ಅವಶ್ಯಕ ಮಾಹಿತಿ ಪಡೆಯಬಹುದಾಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯದ ಸಲುವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ನಂಬರ್: ೧೯೫೦ಕೇಂದ್ರ ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಕೇಂದ್ರದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ವಿಶೇಷ ಪ್ರಕ್ರಿಯೆಯಲ್ಲಿ ಬಿಎಲ್ ಓಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿಯೊಂದೂ ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವಂತೆ ರಾಜಕೀಯ ಪಕ್ಷಗಳಿಗೆ ತಿಳಿಸಲಾಗಿದೆ ಎಂದರು. ವಿಶೇಷ ಸಮಗ್ರ ಪರಿಷ್ಕರಣೆಯು ಮತದಾರರು, ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಆಯೋಗದ ಎಲ್ಲ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದ್ದು, ಪರಿಷ್ಕರಣೆ ಪ್ರಕ್ರಿಯೆ ವೇಳೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ, ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು (ಎನ್ಯುಮರೇಶನ್) ವಿತರಣೆ ಹಾಗೂ ಸಂಗ್ರಹ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇಆರ್‌ಒಗಳ ಸಂಪರ್ಕ: ಮುದ್ದೇಬಿಹಾಳ ಇಆರ್‌ಒ ಬದ್ರೂದ್ದೀನ್ ಸೌದಾಗರ, ಮೊ.೯೪೪೮೩೯೨೦೦೫, ದೇವರಹಿಪ್ಪರಗಿ ಇಆರ್‌ಒ ಚಿದಾನಂದ ಗುರುಸ್ವಾಮಿ, ಮೊ.೯೪೮೩೯೬೬೨೭೧, ಬಸವನಬಾಗೇವಾಡಿ ಇಆರ್‌ಒ ಎಂ.ಬಿ. ನಾಗಠಾಣ, ಮೊ.೯೪೪೮೪೨೬೫೪೯, ಬಬಲೇಶ್ವರ ಇಆರ್‌ಒ ಗುರುನಾಥ ದಡ್ಡೆ, ಮೊ.೯೫೯೯೯೦೯೭೨೪, ವಿಜಯಪುರ ನಗರದ ಇಆರ್‌ಒ ವಿಜಯ ಮೆಕ್ಕಳಕಿ, ಮೊ.೯೭೩೯೫೮೨೬೧೯, ನಾಗಠಾಣ ಇಆರ್‌ಒ ರಾಜಶೇಖರ ಡಂಬಳ, ಮೊ.೯೯೦೨೫೮೧೯೮೮, ಇಂಡಿ ಇಆರ್‌ಒ ಚಿದಾನಂದ ಗುರುಸ್ವಾಮಿ, ಮೊ.೯೪೮೩೯೬೬೨೭೧, ಸಿಂದಗಿ ಇಆರ್‌ಒ ವಿನಯಕುಮಾರ ಪಾಟೀಲ, ಮೊ.೮೯೫೧೪೨೦೩೯೯ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಎಇಆರ್‌ಒ ವಿವರ: ಮುದ್ದೇಬಿಹಾಳ ಮತಕ್ಷೇತ್ರಕ್ಕೆ ಕೀರ್ತಿ ಚಳಕ್, ಎ.ಡಿ. ಅಮರವಾಡಗಿ ಹಾಗೂ ವಿನಯ ಹೂಗಾರ ಅವರನ್ನು ನೇಮಕ ಮಾಡಲಾಗಿದೆ. ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ನಿಂಗಪ್ಪ ಬಿರಾದಾರ, ವೈ.ಎಸ್. ಸೋಮನಕಟ್ಟಿ, ಎ.ಡಿ. ಅಮರವಾಡಗಿ ಹಾಗೂ ವಿನಯ ಹೂಗಾರ ಅವರನ್ನು ನೇಮಕ ಮಾಡಲಾಗಿದೆ. ಬಸವನಬಾಗೇವಾಡಿಗೆ ವೈ.ಎಸ್. ಸೋಮನಕಟ್ಟಿ, ಸಂತೋಷ ಮ್ಯಾಗೇರಿ, ಎ.ಡಿ. ಅಮರವಾಡಗಿ ಅವರನ್ನು ನೇಮಕ ಮಾಡಲಾಗಿದೆ. ಬಬಲೇಶ್ವರ ಮತಕ್ಷೇತ್ರಕ್ಕೆ ಶಾಂತಲಾ ಚಂದನ್, ಪ್ರಶಾಂತ ಚನಗೊಂಡ, ಸುರೇಶ ಚವಲಾರ ಅವರನ್ನು ನೇಮಕ ಮಾಡಲಾಗಿದೆ. ವಿಜಯಪುರ ನಗರ ಮತಕ್ಷೇತ್ರಕ್ಕೆ ಯು.ಎಸ್. ಗುಡ್ಡದ, ಸುರೇಶ ಚವಲಾರ ಅವರನ್ನು ನೇಮಕ ಮಾಡಲಾದರೆ, ನಾಗಠಾಣಕ್ಕೆ ಪ್ರಶಾಂತ ಚನಗೊಂಡ ಹಾಗೂ ಎಸ್.ಬಿ. ಇಂಗಳೆ ಅವರನ್ನು ನೇಮಕ ಮಾಡಲಾಗಿದೆ. ಇಂಡಿಗೂ ಎಸ್.ಬಿ. ಇಂಗಳೆ ಅವರನ್ನು ನೇಮಕ ಮಾಡಲಾಗಿದೆ. ಸಿಂದಗಿ ಮತಕ್ಷೇತ್ರಕ್ಕೆ ಕರೆಪ್ಪ ಬೆಳ್ಳಿ, ಬಿ.ಎಸ್. ಕಡಕಬಾವಿ, ಕರೆಪ್ಪ ಬೆಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹಾಗೂ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಜಿಲ್ಲಾಧಿಕಾರಿ ಕಚೇರಿಯ ಸಚ್ಚಿದಾನಂದ ತೇರದಾಳ ಉಪಸ್ಥಿತರಿದ್ದರು.

ಮನೆ ಗಣತಿ ಸಹಕಾರಕ್ಕೆ ಕೋರಿಕೆ

ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ಬಿಎಲ್‌ಒಗಳ ಮೂಲಕ ಗಣತಿ ನಮೂನೆ ತಲುಪಿಸಲಾಗುವುದು. ಇದರಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ಸಂಬಂಧಿಕರ ಹೆಸರು ಹಾಗೂ ವಿಧಾನಸಭಾ ಕ್ಷೇತ್ರದ ವಿವರಗಳು ಇರಲಿವೆ. ಬಿಎಲ್‌ಒಗಳು ಮನೆಗಳಿಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಗಣತಿ ನಮೂನೆಗಳನ್ನು ತಲುಪಿದ ನಂತರ ವಿವರಗಳು ಸರಿಯಾಗಿವೆಯೇ ಎಂಬುದನ್ನು ಮತದಾರರಿಂದ ದೃಢೀಕರಿಸಿಕೊಂಡು ಸಹಿ ಪಡೆದು ವಾಪಸ್ ತರಲಿದ್ದಾರೆ ಎಂದರು.
ಸಾರ್ವಜನಿಕರು ಗಣತಿ ನಮೂನೆ ಸ್ವೀಕರಿಸಿ, ಪರಿಶೀಲಿಸಿ ಕಡ್ಡಾಯವಾಗಿ ಬಿಎಲ್‌ಒಗಳಿಗೆ ವಾಪಸ್ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಕ್ಟೋಬರ್ ೭ ರಂದು ಅಂತಿಮ ಮತಪಟ್ಟಿ ಪ್ರಕಟ

ಆಗಸ್ಟ್ ೫ ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ನೊಟೀಸ್ ಹಂತ ಹಾಗೂ ಹಕ್ಕು ಮತ್ತು ಆಕ್ಷೇಪಣೆ ವಿಲೇವಾರಿ ಆಗಸ್ಟ್ ೫ ರಿಂದ ೦೩ ಅಕ್ಟೋಬರವರೆಗೆ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಇತ್ಯರ್ಥವಾದ ಬಳಿಕ ಅಕ್ಟೋಬರ್ ೭ ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.