ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾ ತಂಡಗಳು ಮತ್ತು ಕಲಾವಿದರನ್ನು ಎಂಪೆನ್ನೆಲ್ ಮಾಡುವ ಸಲುವಾಗಿ ಜಿಲ್ಲೆಯ ಕಲಾವಿದರು ನಿಗದಿತ ಅರ್ಜಿ ನಮೂನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ಸಂಸ್ಕೃತಿ ಸಂಬಂಧಗಳ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ,ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.ಹಾಗಾಗಿ ಐಸಿಸಿಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಕಲಾವಿದರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುವುದು. ಅದಕ್ಕಾಗಿ ಜಿಲ್ಲೆಯ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪೆನ್ನೆಲ್ ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಪ್ರಚುರಪಡಿಸಲಾಗುವುದು. ಹಾಗಾಗಿ ಜಿಲ್ಲೆಯ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರ ಇವರಿಗೆ ಜೂ. ೧೨ ರೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಅರ್ಜಿ ನಮೂನೆ ಇಲಾಖೆಯ ವೆಬ್ ಸೈಟ್ :www.kannadasiri.karnataka.gov.inನಲ್ಲಿದೆ. ಅದನ್ನು ಡೌನ್ ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೩೫೨-೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
