ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳ ೬ನೇ ತರಗತಿಯಿಂದ ೯ನೇ ತರಗತಿಯವರೆಗೆ ಪ್ರವೇಶಾತಿಗಾಗಿ ಜೂನ್ ೭ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೧, ಕುಂಬಾರ ಗಲ್ಲಿ, ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೨, ಟೇಕಡೆ ಗಲ್ಲಿ, ಶಾಲೆಗಳಿಂದಲೇ ನೇರವಾಗಿ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
