ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ, ಪ್ರಥಮ ಬಾರಿಗೆ ವಿಜಯಪುರಕ್ಕೆ ಆಗಮಿಸುತ್ತಿರುವ ಸಚಿವ ಎಂ. ಬಿ. ಪಾಟೀಲರಿಗೆ ವಿಜಯಪುರ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರ ವತಿಯಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ದಿ.6 ಶನಿವಾರ ನಗರದ ಪಾಟೀಲ ಗಾರ್ಡೇನಿಯಾದಲ್ಲಿ ಬೆ.೧೧ ಗಂ. ನಡೆಯಲಿರುವ ಸಮಾರಂಭದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭಾಗವಹಿಸಿ ಸಚಿವ ಎಂ ಬಿ ಪಾಟೀಲ ಅವರನ್ನು ಸನ್ಮಾನಿಸಲಿದ್ದಾರೆ.

