Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಗದಿತ ದರದಲ್ಲಿ ರಸಗೊಬ್ಬರ ಪೂರೈಸಲು ರೈತರಿಂದ ಮನವಿ
(ರಾಜ್ಯ ) ಜಿಲ್ಲೆ

ನಿಗದಿತ ದರದಲ್ಲಿ ರಸಗೊಬ್ಬರ ಪೂರೈಸಲು ರೈತರಿಂದ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ರೈತರಿಗೆ ಸರ್ಕಾರ ನಿಗದಿಪಡಿಸಿದ ದರದಲ್ಲಿ ರಸಗೊಬ್ಬರ ಪೂರೈಸುವಂತೆ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಡಚಣ ತಾಲೂಕಿನ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಮುಖಂಡರು ಚಡಚಣ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಚಡಚಣ ತಾಲೂಕು ದಂಡಾಧಿಕಾರಿಗಳು ಹಾಗೂ ತಹಸೀಲ್ದಾರ ಸಂಜೆಯ ಇಂಗಳೆ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಪ್ರಸ್ತುತ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಯೂರಿಯಾ, ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಕೆಲ ಖಾಸಗಿ ಮಾರಾಟಗಾರರು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಕೃಷಿ ವೆಚ್ಚ ಹೆಚ್ಚಾಗುತ್ತಿದೆ. ರೈತರಿಗೆ ಅಗತ್ಯವಿರುವ ರಸಗೊಬ್ಬರಗಳು ಸಹಕಾರ ಸಂಘಗಳು ಹಾಗೂ ಅಧಿಕೃತ ಮಾರಾಟ ಕೇಂದ್ರಗಳಲ್ಲಿ ಸಮರ್ಪಕ ಪ್ರಮಾಣದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಅಗತ್ಯವಿದ್ದರೆ ಅವರ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ನಾಗೇಶ ಸರಸಂಬಿ ಮಾತನಾಡಿ, “ರೈತರು ದೇಶದ ಬೆನ್ನೆಲುಬು. ಬಿತ್ತನೆ ಸಮಯದಲ್ಲಿ ರಸಗೊಬ್ಬರ ಕೊರತೆ ಹಾಗೂ ಹೆಚ್ಚುವರಿ ದರ ವಸೂಲಿಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಚಡಚಣ ತಾಲೂಕು ಅಧ್ಯಕ್ಷ ನಾಗೇಶ ಸರಸಂಬಿ, ತಾಲೂಕು ಉಪಾಧ್ಯಕ್ಷ ರಮಜಾನ್ ಕೊಂಕಣಿ, ತಾಲೂಕು ಪ್ರಧಾನ ಕಾರ್ಯದರ್ಶಿ ಅಮಸಿದ್ದ ತೊಳೆ, ನಗರ ಘಟಕ ಅಧ್ಯಕ್ಷ ಅಣ್ಣ ಪೂಜಾರಿ, ರಾಯಗೊಂಡ ಕೋಳಿ, ಸುನೀಲ ತೊಳೆ, ನಿಂಗಪ್ಪ ಶಿವಶರಣ, ಗೌರೇಶ ಖಡ್ಡೆ, ಮಲ್ಲಿಕಾರ್ಜುನ ಕಾಂಬಳೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.