Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕೀಲ ಖಾದ್ರಿ ವಿರುದ್ಧ ಕ್ರಮಕ್ಕೆ ಶಾಸಕ ಯತ್ನಾಳ ಬೆಂಬಲಿಗರಿಂದ ಮನವಿ
(ರಾಜ್ಯ ) ಜಿಲ್ಲೆ

ವಕೀಲ ಖಾದ್ರಿ ವಿರುದ್ಧ ಕ್ರಮಕ್ಕೆ ಶಾಸಕ ಯತ್ನಾಳ ಬೆಂಬಲಿಗರಿಂದ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ವಕೀಲ ಸೈಯದ್ ಆಸೀಫ್ ಉಲ್ಲಾ ಸೈಯದ್ ಖಾದರ್ ಭಾಷಾ ಖಾದ್ರಿ ಮೇಲೆ ಕೇಸ್ ದಾಖಲಿಸಿ, ಬಂಧಿಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಬೆಂಬಲಿಗರು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ವಿಜಯಪುರದ ವಕೀಲ ಸೈಯದ್ ಆಸೀಫ್ ಉಲ್ಲಾ ಸೈಯದ್ ಖಾದರ್ ಭಾಷಾ ಖಾದ್ರಿ ಎಂಬಾತ ಜನಪ್ರತಿನಿಧಿಯಾದ ಬಸನಗೌಡ ಪಾಟೀಲ ಯತ್ನಾಳರ ಬಗ್ಗೆ ಪದೇ ಪದೇ ಅತ್ಯಂತ ಕೀಳು ಮಟ್ಟದ ಅವಾಚ್ಯ ಶಬ್ದಗಳನ್ನು ಬಳಸಿ ಏಕವಚನದಲ್ಲಿ ಅವಹೇಳನಕಾರಿ ಮಾತನಾಡಿದ್ದು, ಎಲ್ಲ ಕಡೆ ವೈರಲ್ ಆಗಿದೆ. ಇದರಿಂದ ರಾಜ್ಯಮಟ್ಟದಲ್ಲಿ ಬಸನಗೌಡ ಪಾಟೀಲ ಯತ್ನಾಳರ ಹೆಸರಿಗೆ ಕಳಂಕವನ್ನು ಸತತವಾಗಿ ತರುತ್ತಿದ್ದಾನೆ. ಇವನ ಹೀನ ನಡೆಯಿಂದ ರಾಜ್ಯಾದ್ಯಂತ ಇರುವ ಬಸನಗೌಡರ ಲಕ್ಷಾಂತರ ಹಿಂದೂ ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳು ಅಲ್ಲದೆ, ಸಮಾಜ ಬಾಂಧವರು ರೊಚ್ಚಿಗೆದ್ದು ಇವನ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ವಿಜಯಪುರ ನಗರಕ್ಕೆ ಎಲ್ಲ ಕಡೆಯಿಂದ ಆಗಮಿಸಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಕೇಳುತ್ತಿದ್ದಾರೆ.
ಶಾಂತವಾದ ವಿಜಯಪುರ ನಗರದಲ್ಲಿ ಯಾವುದೇ ಅಹಿತಕರ ಅನಾಹುತ ಘಟನೆಗಳು ಸಂಭವಿಸದಂತೆ ಮುನ್ನಚ್ಚರಿಕಾ ಕ್ರಮವಾಗಿ ಅವನನ್ನು ಬಂಧಿಸಿ, ಕೇಸ್ ದಾಖಲಿಸಿಕೊಂಡು, ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಅಲ್ಲದೆ, ಇಂತಹ ಕ್ರಮಿನಲ್ ವ್ಯಕ್ತಿಯಿಂದ ಸಾರ್ವಜನಿಕರಿಗೆ ಯಾವುದೇ ನ್ಯಾಯ ಸಿಗಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ ವಕೀಲ ಹುದ್ದೆಯಿಂದಲೂ ತಕ್ಷಣ ವಜಾ ಮಾಡಬೇಕು.
ಈಗಾಗಲೇ ಇತನ ವಿರುದ್ಧದ ದಲಿತ ಮಹಿಳೆ ಮೇಲೆ ಹಲ್ಲೆ ಹಾಗೂ ಕಿರುಕುಳ ನೀಡಿದ ಪ್ರಕರಣ, ಕೋರ್ಟ ಆವರಣದಲ್ಲಿಯೇ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ, ಮಹಾನಗರ ಪಾಲಿಕೆ ಸದಸ್ಯೆಯ ಪತಿಯ ಹತ್ಯೆ ಪ್ರಕರಣ, ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರ ಬಗ್ಗೆ ಕೆಟ್ಟ ಪದ ಬಳಸಿ ನಿಂಧಿಸಿದ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ರೌಡಿಶೀಟರ್ ನಿಂದಾಗಿ ಗಡಿಪಾರು ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಆಗಿದ್ದಾನೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಕೆಲಸವೇ ಸಮಾಜದಲ್ಲಿ ಗಲಭೆ ಸೃಷ್ಟಿಸಿ ಅಶಾಂತಿ ನಿರ್ಮಾಣ ಮಾಡುವ ದುರುದ್ದೇಶ ಹೊಂದಿದ್ದಾನೆ. ಅದಕ್ಕೆ ಅವಕಾಶ ಕಲ್ಪಿಸಬಾರದು.
ಸಮಾಜದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳ ಬಗ್ಗೆ ಕೀಳು ಮಟ್ಟದ ಅವಾಚ್ಯ ಶಬ್ದಗಳನ್ನು ಬಳಸಿ, ಏಕವಚನದಲ್ಲಿ ಸಂಭೋಧಿಸುವ ಮೂಲಕ ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಅವಮಾನ ಮಾಡುತ್ತಿರುವ ವಕೀಲ ಸೈಯದ್ ಆಸೀಫ್ ಉಲ್ಲಾ ಸೈದ್ ಖಾದರ್ ಭಾಷಾ ಖಾದ್ರಿ ಮೇಲೆ ಶೀಘ್ರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ವಿಕ್ರಮ ಗಾಯಕವಾಡ, ಬಾಬು ಶಿರಶ್ಯಾಡ, ಸುನೀಲ ಬೈರವಾಡಗಿ, ಅಶೋಕ ಬೆಲ್ಲದ, ಕಿರಣ ಕಾಳೆ, ಲಕ್ಷ್ಮಣ ಜಾಧವ, ಯುವರಾಜ ಚೋಳಕೆ, ರಮೇಶ ಪಡಸಲಗಿ, ಸಂಜು ಭೋಸಲೆ, ಶಿವಾನಂದ ಸಿಂದಗಿ, ಸುರೇಶ ಚವ್ಹಾಣ, ಗುಂಡೇಶ್ವರ ಹಳಕಟ್ಟಿ, ಪ್ರದೀಪ ಕಲ್ಯಾಣಶೆಟ್ಟಿ, ಪ್ರಸಾದ ಶಿವಸಿಂಪಿ, ಅನೀಲ ಭೂಸನೂತ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.