ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಲ್ಲ ಇಲಾಖೆಗಳು ಸಮನ್ವಯತೆಯೊಂದಿಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜೂನ್ ೧೨ರಂದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಇತ್ತೀಚಿಗೆ ನಡೆದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಎಡಿಸಿ ಡಾ.ಔದ್ರಾಮ ಅವರು ಮಾತನಾಡಿದರು. ನಿರ್ದೇಶಾನುಸಾರ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರ ಸಭೆ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಘೋಷಣೆ ಹಾಗೂ ಪಂಚಾಯಿತಿಗಳಲ್ಲಿ ಡಂಗುರ ಸಾರಿಸಬೇಕು ಎಂದು ಸೂಚಿಸಿದರು. ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ನಡೆಯಲಿರುವ ಜಾಥಾ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ ಅವರು,
ಬಾಲಕಾರ್ಮಿಕ ಮುಕ್ತ ಗ್ರಾಮಕ್ಕೆ ಬಹುಮಾನ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿಗಳನ್ನು ದಿನದಂದು ಪ್ರಮಾಣ ವಚನ ಸ್ವೀಕರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರುಗಳು, ಯೋಜನಾ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

