Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ | ಲಿಖಿತ ಭರವಸೆ ಬಳಿಕ ಹಿಂಪಡೆತ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಆಲಮಟ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಆಲಮಟ್ಟಿಯ ರಾಮಲಿಂಗೇಶ್ವರ ವೃತ್ತದಲ್ಲಿ ನೂರಾರು ರೈತರು ವೃತ್ತಾಕಾರವಾಗಿ ನಿಂತು ಪ್ರತಿಭಟಿಸಿದರು.
ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ, ಶಾಂತಗೌಡ ಪಾಟೀಲ ಸಂಗಮೇಶ ಸಗರ, ರಾಹುಲ ಕುಬಕಡ್ಡಿ, ಶಶಿಕಾಂತ ಗುರೂಜಿ, ಕಲ್ಲು ಸೊನ್ನದ ಮತ್ತಿತರರು ಮಾತನಾಡಿ, “೨೦೧೭ರಲ್ಲಿ ಆರಂಭಗೊಂಡ ನಾಗರಬೆಟ್ಟ ಏತ ನೀರಾವರಿ ಯೋಜನೆ ೮ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ೩೦೬ ಎಕರೆ ಭೂಮಿಗೆ ಪರಿಹಾರ ನೀಡದೇ ಕಾಮಗಾರಿ ನಡೆಸಲಾಗಿದೆ. ಭೂಸ್ವಾಧೀನ ಜಮೀನಿಗೆ ಇನ್ನೂ ಅವಾರ್ಡ್ ಆಗಿಲ್ಲ. ಮಾರುಕಟ್ಟೆ ಬೆಲೆಗಿಂತ ಕಡಿಮೆ ಪರಿಹಾರ ನೀಡಲಾಗಿದೆ” ಎಂದು ಆರೋಪಿಸಿದರು.
“ಕೆಲವೇ ಮೀಟರ್ ಕಾಮಗಾರಿ ಬಾಕಿ ಇದೆ. ಭೂಮಿ ವಶಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಲಿಖಿತ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ” ಎಂದು ಪಟ್ಟು ಹಿಡಿದರು.
ಹೋರಾಟ ವಾಪಸ್:
ಯುಕೆಪಿಯ ವಿಶೇಷ ಭೂಸ್ವಾಧೀನಾಧಿಕಾರಿ ಎಂ.ಬಿ. ನಾಗಠಾಣ, “ಒಪ್ಪಿತ ದರದ ಐ-ತೀರ್ಪು ರಚಿಸಲು ರೈತರು ಒಪ್ಪಿದರೆ ನಿಯಮನುಸಾರ ಮೂರು ತಿಂಗಳಲ್ಲಿ ಐ-ತೀರ್ಪು ಪ್ರಕಟಿಸಿ ಪರಿಹಾರ ನೀಡಲಾಗುವುದು” ಎಂದು ಲಿಖಿತ ಪತ್ರ ನೀಡಿದ ಬಳಿಕ ಸಂಜೆ ರೈತರು ಹೋರಾಟ ಹಿಂಪಡೆದರು.
ಚಿಮ್ಮಲಗಿಯ ಸಿದ್ಧರೇಣುಕ ಸ್ವಾಮೀಜಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಶಿವಾನಂದ ಟಕ್ಕಳಕಿ, ಶಶಿಕಾಂತ ದೇಸಾಯಿ, ಹನುಮಂತ ತಳವಾರ, ರವಿಶಂಕರ ಕೋತಿನ, ನಿಂಗರಾಜ ಆಲೂರ, ಸೀತಪ್ಪ ಗಣಿ ಮತ್ತಿತರರು ಉಪಸ್ಥಿತರಿದ್ದರು.

ರೈತರ ಮುಖ್ಯ ಬೇಡಿಕೆಗಳು

೧. ಯೋಜನಾ ನಿರಾಶ್ರಿತ ಪ್ರಮಾಣಪತ್ರ ನೀಡಬೇಕು.
೨. ನಿರಾಶ್ರಿತ ರೈತರ ನಿರುದ್ಯೋಗಿ ಮಕ್ಕಳಿಗೆ ಜೀವನಾಧಾರ ಭತ್ಯೆ ಒದಗಿಸಬೇಕು.
೩. ಕಲ್ಯಾಣ ಕರ್ನಾಟಕದ ೩೭೧(ಜೆ) ಮಾದರಿಯಲ್ಲಿ ಸೌಲಭ್ಯ, ಮೀಸಲಾತಿ ನೀಡಬೇಕು.

ಅಧಿಕಾರಿಗಳ ಸ್ಪಷ್ಟನೆ

ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಎಂಜಿನಿಯರ್ ಡಿ. ಬಸವರಾಜ, ಕೆಬಿಜೆಎನ್‌ಎಲ್‌ನ ತಾಂತ್ರಿಕ ನಿರ್ದೇಶಕ ವಿ.ಎಸ್. ಹಿರೇಗೌಡರ, “ಯೋಜನೆಯ ಮುಖ್ಯ ಕಾಲುವೆಯ ಸುಮಾರು ೧ ಕಿ.ಮೀ ಕಾಮಗಾರಿ ಮಾತ್ರ ಬಾಕಿ ಇದೆ. ರೈತರು ಸಹಕರಿಸಿದರೆ ನಾಳೆಯೇ ಕಾಮಗಾರಿ ಆರಂಭಿಸುತ್ತೇವೆ. ಭೂಸ್ವಾಧೀನಕ್ಕಾಗಿ ಕೆಬಿಜೆಎನ್‌ಎಲ್ ೨೨೩ ಕೋಟಿ ರೂ. ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಡಿಪಾಸಿಟ್ ಮಾಡಿದೆ” ಎಂದರು.
ಯುಕೆಪಿ ಪುನರ್ವಸತಿ ವಿಶೇಷ ಜಿಲ್ಲಾಧಿಕಾರಿ ಮಾರುತಿ ಬ್ಯಾಕೋಡ, “ರೈತರು ಒಪ್ಪಂದದ ಬೆಲೆಗೆ ಪರಿಹಾರ ಪಡೆಯಲು ಒಪ್ಪಿದರೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಮೂರು ತಿಂಗಳೊಳಗೆ ಪರಿಹಾರ ನೀಡಲಾಗುವುದು” ಎಂದರು.

ಭಾರಿ ಬಂದೋಬಸ್ತ್

ಬಸವನಬಾಗೇವಾಡಿ ಡಿವೈಎಸ್‌ಪಿ ನೇತೃತ್ವದಲ್ಲಿ ೧೫೦ಕ್ಕೂ ಅಧಿಕ ಪೊಲೀಸರು, ಇಬ್ಬರು ಸಿಪಿಐ, ೧೦ಕ್ಕೂ ಹೆಚ್ಚು ಪಿಎಸ್‌ಐಗಳು ಬಂದೋಬಸ್ತ್ ಕೈಗೊಂಡಿದ್ದರು. ರಾಕ್ ಗಾರ್ಡನ್, ಕೃಷ್ಣಾ ಉದ್ಯಾನ, ಲವ-ಕುಶ ಉದ್ಯಾನ, ವಾಟರ್ ಪಾರ್ಕ್ ಸಂಪೂರ್ಣ ಬಂದ್ ಮಾಡಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.