ವಿಜಯಪುರದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೇಟ್ ಬಾಲ್ ಕ್ರೀಡಾಕೂಟ
ವಿಜಯಪುರ: ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಬೇಕು. ಕ್ರೀಡಾಭ್ಯಾಸ ಶಿಕ್ಷಣದ ಒಂದು ಅವಿಭಾಜ್ಯ ಅಂಗ ಎರಡರಲ್ಲೂ ಉತ್ತಮ ಸಾಧನೆ ಮಾಡಬೇಕು ಎಂದು ವಿಜಯಪುರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪಿ.ಠಾಕೋರ ಹೇಳಿದರು.
ಬಿಜಾಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರು(ಆಡಳಿತ) ಕಾರ್ಯಾಲಯ ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಬೆಳಗಾವಿ ವಿಭಾಗ ಮಟ್ಟದ ‘ಬಾಸ್ಕೇಟ್ ಬಾಲ್’ ಕ್ರೀಡಾಕೂಟವನ್ನು ಸಸಿಗೆ ನೀರನ್ನು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ, ಸಮತೋಲನ ಬೆಳವಣಿಗೆಗೆ ಅತ್ಯವಶ್ಯ. ಸೋಲು ಗೆಲುವನ್ನು ಸಮಾವಾಗಿ ಸ್ವೀಕರಿಸಬೇಕು. ಕಠಿಣ ಪರಿಶ್ರಮದಿಂದ ಗುರಿ ಸಾಧಿಸಬಹುದಾಗಿದೆ. ವಿದ್ಯಾರ್ಥಿಗಳ ಕೌಶಲ್ಯ ಗುರುತಿಸಿ, ಕ್ರೀಡಾಭ್ಯಾಸದಲ್ಲಿ ತೊಡಗಲು ಪೋಷಕರು, ಶಿಕ್ಷಕರು ಪ್ರೇರಣೆ ನೀಡಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಜಾರಾ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಂದೀಪ ರಾಠೋಡ, ದೈಹಿಕ ಶಿಕ್ಷಕ ಅಶೋಕ ಚವ್ಹಾಣ. ನಗರ ವಲಯ ಶಿಕ್ಷಣಾಧಿಕಾರಿ ಎಸ್.ಎ.ಬಿರಾದಾರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್. ಬರನೂರ, ರಾಜ್ಯ ಕ್ರೀಡಾ ಕಾರ್ಯದರ್ಶಿ ಎಂ.ಆರ್.ಮಕಾನದಾರ, ವಿಭಾಗೀಯ ಕ್ರೀಡಾ ಕಾರ್ಯದರ್ಶಿ ಶಂಕರ ಚವ್ಹಾಣ, ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಎ.ಕೋಳಿ, ಎಸ್.ವಿ.ದೇಶಪಾಂಡೆ ಸೇರಿದಂತೆ ಇತರ ಎಲ್ಲ ಜಿಲ್ಲೆಗಳ ದೈಹಿಕ ಶಿಕ್ಷಕರುಗಳು, ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

