ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಾದಕ ದ್ರವ್ಯ ವಿರೋಧಿ ಸಮಿತಿ ರಚಿಸಲಾಗುತ್ತಿದೆ. ಈ ಸಮಿತಿಯು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತಾಗಬೇಕೆಂದು ಪಿಆ ಗುರುಶಾಂತ ದಾಶ್ಯಾಳ ಹೇಳಿದರು.
ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಔಷಧ ಮಹಾವಿದ್ಯಾಲಯದಲ್ಲಿ ಸ್ಥಳೀಯ ಪೊಲೀಸ್ ಠಾಣೆಯು ಮಂಗಳವಾರ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ವಿರೋಧಿ ಸಮಿತಿ ರಚನೆ ಸಭೆಯಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿ ತಂಡ ರಚನೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಾದಕ ದ್ರವ್ಯ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಕಾಲೇಜ್ ಮಟ್ಟದಲ್ಲಿ ತಂಡ ರಚನೆ ಮಾಡಿ ಮಾದಕ ದ್ರವ್ಯ ತಡೆಗಟ್ಟುವ ಸಲವಾಗಿ ಹಾಗೂ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕೆಲವು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಡ್ರಗ್ಸ್ ಬಗ್ಗೆ ತಮ್ಮ ಗಮನಕ್ಕೆ ಬಂದರೆ ನಮಗೆ ಯಾವುದೇ ಭಯ ಭೀತಿಯಿಲ್ಲದೆ ನಮ್ಮ ಗಮನಕ್ಕೆ ತಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.ಎಲ್ಲರೂ ಸೇರಿ ಕಾರ್ಯ ಮಾಡುವದರಿಂದ ಸಮಾಜದ ಒಳತಿಗಾಗಿ ಕೈಜೋಡಿಸಿದಂತೆ ಆಗುತ್ತದೆ. ಈ ಸಮಿತಿಯಲ್ಲಿ ಪೊಲೀಸ್ ಠಾಣೆಯ ಪಿಐ, ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರು, ಬಿಟ್ ಪೊಲೀಸ್ ಸಿಬ್ಬಂದಿಗಳು ಹಾಗೂ 12 ಜನ ವಿದ್ಯಾರ್ಥಿಗಳು ಇದ್ದಾರೆ ಎಂದರು.
ಸಭೆಯಲ್ಲಿ ಔಷಧ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿ.ಸಿ.ಸಿಂಪಿ, ಚೇತನ ತೇಲಿ,ಮಹಾಂತೇಶ ಕೌಟೇಕರ,ರೇಣುಕಾ ಕಬಾಡೆ, ಲಕ್ಷ್ಮಣ ಬಿರಾಜದಾರ, ಸುರೇಶ ಗುಣಕಿ, ಮುತ್ತು ಡಂಬಳ,ಬಸವರಾಜ ಸಂಕ,ಅನಿಲ ಮೇತ್ರೆ,ಡಾ.ಶರಣಬಸಪ್ಪ ಮಾರಾಪುರ, ಪೊಲೀಸ್ ಸಿಬ್ಬಂದಿಗಳಾದ ಜಗದೀಶ ತಕ್ಕೋಡ ಐ,ಜಿ.ಹೊಸಗೌಡರ,ಎಂ.ಡಿ.ಬೂಶೆಟ್ಟಿ ಇತರರು ಇದ್ದರು.

