ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ ಹೇಳಿದರು.
ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಸತಿ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಪ್ರತಿ ಮನೆ ಮಂಜೂರಾತಿಗೆ ಸಂಬಂಧಿಸಿದ ಕಡತಗಳನ್ನು ತ್ವರಿತವಾಗಿ ಪರಿಶೀಲಿಸಿ ಅನುಮೋದನೆ ನೀಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಸೋಮವಾರ ವಸತಿ ಯೋಜನೆಗಳಿಗೆ ಸಂಬAಧಿಸಿದ ವಿಶೇಷ ಅಭಿಯಾನ ನಡೆಸಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಮ್‌ಎವೈ), ಬಸವ ಆವಾಸ ಯೋಜನೆ ಹಾಗೂ ಅಂಬೇಡ್ಕರ್ ಆವಾಸ ಯೋಜನೆಯ ಫಲಾನುಭವಿಗಳ ಮನೆ ನಿರ್ಮಾಣಕ್ಕೆ ಎದುರಾಗುವ ತೊಡಕುಗಳನ್ನು ನಿವಾರಿಸಿ, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸಮಗ್ರ ಸಮೀಕ್ಷೆ ನಡೆಸಿ, ಜಿಲ್ಲಾ ಪಂಚಾಯಿತಿಗೆ ತ್ವರಿತವಾಗಿ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಹಾನಿ ಉಂಟಾಗದAತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಮನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ, ಕಾರ್ಮಿಕರ ತೊಡಗಿಸಿಕೊಳ್ಳುವಿಕೆ, ಇ-ಕೆವೈಸಿ ಪ್ರಗತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಜೊತೆಗೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ, ನೀರಿನ ಟ್ಯಾಂಕರ್‌ಗಳ ಸ್ವಚ್ಛತೆ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ ಪವಾರ, ಎಸ್‌ಬಿಎಂ ವಿಷಯ ನಿರ್ವಾಹಕ ಆನಂದ ಮುದೋಡಗಿ, ವಿಷಯ ನಿರ್ವಾಹಕ ಗೊಲ್ಲಾಳ ರೋಡಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್‌ಗಳು ಹಾಗೂ ಸಿಬ್ಬಂದಿ ಇದ್ದರು.

