ರಾಯಚೂರು: ರಾಜ್ಯ ಕಾಂಗ್ರೆಸ್ ನಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಕಾಂಗ್ರೆಸ್ ನಲ್ಲಿ ಮುಜುಗರ ಉಂಟು ಮಾಡಿದೆ.
ಹೌದು, ಈ ಕುರಿತು ರಾಯಚೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಆಗಬೇಕು ಅಂದ್ರೆ ಆಗಲ್ಲ, ನಮ್ಮಲ್ಲಿ ಪಕ್ಷದ ವರಿಷ್ಠರು ಸಿಎಂ ಯಾರು ಆಗಬೇಕು ಎಂದು ನಿರ್ಧಾರ ಮಾಡುತ್ತಾರೆ. ನಮ್ಮ ಪಾರ್ಟಿಯಲ್ಲಿ ಏನು ನಿರ್ಧಾರ ಮಾಡಬೇಕು ಅದು ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಆಗಬೇಕು ಅಂದ್ರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ ಬರಬೇಕು, ಈಗ ಪಕ್ಷ ಅಧಿಕಾರಕ್ಕೆ ಬಂದಿದೆ, ಇಂತಹ ವೇಳೆಯಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು, ಯಾರನ್ನ ಸಚಿವರನ್ನಾಗಿ ಮಾಡಬೇಕು ಎನ್ನುವುದು ನಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಮಾಡುತ್ತಾರೆ, ನಾನು ಮುಖ್ಯಮಂತ್ರಿ ಆಗುತ್ತೇನೆ ಅಂದ್ರೆ ಮುಖ್ಯಮಂತ್ರಿ ಆಗುತ್ತೀನಾ?, ಹಂಗೆ ಆದ್ರೆ ಬಹಳ ಜನರು ಮುಖ್ಯಮಂತ್ರಿ ಆಗಿಹೋಗುತ್ತಿದ್ರು ಎಂದು ಹೇಳಿದರು.
ನಮ್ಮ ಪಕ್ಷದ ಎಐಸಿಸಿ ಅಧ್ಯಕ್ಷರು ಖರ್ಗೆಯವರು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರು ನಿರ್ಧಾರ ಮಾಡುತ್ತಾರೆ, ಯಾವ ಕಾಲದಲ್ಲಿ ಏನು ಆಗಬೇಕು ಅಂತ ಅವರೇ ನಿರ್ಧಾರಿಸುತ್ತಾರೆ, ಕಾಂಗ್ರೆಸ್ ನಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎನ್ನುವುದು ಎಲ್ಲಾವನ್ನು ಎಂ.ಬಿ.ಪಾಟೀಲ್ ಆಗಲಿ, ಅಶೋಕ ಪಟ್ಟಣ ಆಗಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.
ಇನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆದಷ್ಟು ಬೇಗ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ ಮಾಡಿರುವುದರ ಕುರಿತು ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಹಳ ದೊಡ್ಡ ಮೇಧಾವಿಗಳು, ಅವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ ಎಂದು ತಿಳಿಸಿದರು.
ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಅವರ ಮೇಲೆ ಆರೋಪದ ಪ್ರಕರಣದ ಕುರಿತು ತನಿಖೆಗೆ ಸಿಐಡಿಗೆ ನೀಡುವುದೇ ಅವಶ್ಯ ಇರಲಿಲ್ಲ, ಆದ್ರೂ ನಮ್ಮ ಸರ್ಕಾರ ಸಿಐಡಿ ತನಿಖೆಗೆ ನೀಡಿದೆ, ಈಶ್ವರಪ್ಪನವರ ಕೇಸ್ ಬೇರೆ, ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಕೇಸ್ ಬೇರೆ, ಶರಣಪ್ರಕಾಶ್ ಪಾಟೀಲ್ ಪ್ರಯಾಣಿಕ ಮತ್ತು ಪರಿಶುದ್ಧ ನಾಯಕರಾಗಿದ್ದಾರೆ ಎಂದು ಎಂ ಬಿ ಪಾಟೀಲ್ ಹೇಳಿದರು.
ಇನ್ನು 2024 ಲೋಕಸಭಾ ಚುನಾವಣೆ ಮುನ್ನವೇ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ನಾಯಕರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಎಂ ಬಿ ಪಾಟೀಲ್, ಈಗಾಗಲೇ ಸಾಕಷ್ಟು ಜನ ಬಿಜೆಪಿ ನಾಯಕರೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ, ಲೋಕಸಭಾ ಚುನಾವಣೆವರೆಗೂ ಈಶ್ವರಪ್ಪ ನೋಡಲಿ, ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದ್ರೆ ಅಚ್ಚರಿಪಡಬೇಕಾಗಿಲ್ಲ, ಆದರೆ, ಪಕ್ಷಕ್ಕೆ ಸೇರಿಸಿಕೊಳ್ಳಲು ವಿಚಾರ ಮಾಡುತ್ತೇವೆ ಎಂದು ಹೇಳಿದರು.
ಹೈಕಮಾಂಡ್ ನಿರ್ಧಾರದಂತೆ ಮುಖ್ಯಮಂತ್ರಿ ಆಯ್ಕೆ :ಎಂ.ಬಿ.ಪಾಟೀಲ
Related Posts
Add A Comment