ಉದಯರಶ್ಮಿ ದಿನಪತ್ರಿಕೆ
ಎಚ್ ಡಿ ಕೋಟೆ: ನರೇಂದ್ರಮೋದಿ ಅವರು ದೇಶದಲ್ಲಿ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್ ಡಿ ಕೋಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದ ಪ್ರಧಾನ ಮಂತ್ರಿಗಳಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಾಗೂ ದೇಶದ ಇತಿಹಾಸದಲ್ಲಿ ಅತ್ಯಧಿಕ ಅವಧಿಯವರೆಗೆ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ನಾಯಕರಲ್ಲಿ ಒಬ್ಬರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಕಾರ್ಯ ಸಾಮರ್ಥ್ಯ ದೊರೆಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪಟ್ಟಣದ ಮೇಟಿಕುಪ್ಪೆ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಲಿ ವಿಶೇಷ ಪೂಜೆ, ಅರ್ಚನ ಮಾಡಿಸಿ, ಭಕ್ತರಿಗೆ ಪ್ರಸಾದ ವಿತರಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಸ್ವಚ್ಛತೆ ಮತ್ತು ಗಿಡ ನೆಟ್ಟು ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಿಕೆ ಗಿರೀಶ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದಿದೆ. ಅಭಿವೃದ್ಧಿ, ಆರ್ಥಿಕ ಪ್ರಗತಿ, ರಾಷ್ಟ್ರೀಯ ಭದ್ರತೆ ಹಾಗೂ ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳು ನಡೆದಿದ್ದು, ವಿಶ್ವದ ರಾಷ್ಟ್ರಗಳು ಭಾರತದತ್ತ ಗೌರವದಿಂದ ನೋಡುವಂತಾಗಿದೆ ಎಂದು ಬಣ್ಣಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಟಿ ವೆಂಕಟೇಶ್ ಮಾತನಾಡಿದರು.
ಪ್ರಧಾನ ಕಾರ್ಯದರ್ಶಿ ಗುರುಸ್ವಾಮಿ ಹಾಗೂ ರಾಜು, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ ವೆಂಕಟೇಶ್, ಸೈಯದ್ ಅಕ್ರಮ್ಮೊ ಪಾಷಾ, ಮೊತ್ತ ಬಸವರಾಜಪ್ಪ, ಮಾದಾಪುರ ನಂದೀಶ್, ಕುಮಾರ್, ರೂಪೇಶ್, ಸೋಮಾಚಾರ, ಕೆಂಡಗಣ್ಣ ಸ್ವಾಮಿ, ಗುರುಸ್ವಾಮಿ, ರಾಮಚಂದ್ರಣ್ಣ, ಯುವ ಮೋರ್ಚಾ ಅಧ್ಯಕ್ಷ ಪೃಥ್ವಿ ಕುಮಾರ್, ಮಧ್ಯಪ್ರಕಾಶ್, ವಿವೇಕಾನಂದ ಚಂದ್ರಮೌಳೇಶ್ವರ, ಮಹದೇವಪ್ಪ, ಸುರೇಶ್ ಶ್ರೀರಾಮುಲು, ಸೋಮಾಚಾರ್, ಶಿವಣ್ಣ ಮಹಾದೇವ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರು.

