ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪ್ರತಿಷ್ಠಿತ ಖಾಸಗಿ ವಲಯದ ಬ್ಯಾಂಕ್ ಆಗಿರುವ ಐ.ಡಿ.ಎಫ್.ಸಿ ಫಸ್ಟ್ ಬ್ಯಾಂಕ್‌ನ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಜೂ.೧೬ ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿಯಿರುವ ಅಸೋಸಿಯೆಟ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಈ ಸಂದರ್ಶನ ನಡೆಯಲಿದೆ. ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರುವ ಹಾಗೂ ೨೮ ವರ್ಷದೊಳಗಿನ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (ರೆಸ್ಯೂಂ) ಹಾಗೂ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸೋಲಾಪುರ ರಸ್ತೆ, ಕೆ.ಎಚ್.ಬಿ. ಕಾಲೋನಿ, ವಿಜಯಪುರದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಇಲ್ಲವೇ ದೂರವಾಣಿ ಸಂಖ್ಯೆ ೯೯೪೫೦೦೦೭೯೩ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
