Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!
(ರಾಜ್ಯ ) ಜಿಲ್ಲೆ

೫ ಸಾವಿರ ಪ್ರಕರಣಗಳಿಗೆ ಇಲ್ಲಿ ಒಬ್ಬರೇ ನ್ಯಾಯಾಧೀಶರು!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ-ತಾಳಿಕೋಟೆ ನ್ಯಾಯಾಲಯಗಳಲ್ಲಿ ಒಬ್ಬರೇ ನ್ಯಾಯಾಧೀಶರು ಕಾರ್ಯನಿರ್ವಹಿಸುವ ವ್ಯವಸ್ಥೆ | ನ್ಯಾಯ ವಿತರಣೆಗೆ ಹಿನ್ನಡೆಯ ಆತಂಕ | ಹೆಚ್ಚುವರಿ ನ್ಯಾಯಾಲಯ ಬೇಡಿಕೆ

ಉದಯರಶ್ಮಿ ದಿನಪತ್ರಿಕೆ

ವರದಿ: ಚೇತನ ಶಿವಶಿಂಪಿ
ಮುದ್ದೇಬಿಹಾಳ: ಈಗಾಗಲೇ ಸುಮಾರು ೫ ಸಾವಿರಕ್ಕೂ ಹೆಚ್ಚು ಪ್ರಕರಣಗಳ ಭಾರ ಹೊತ್ತಿರುವ ಪಟ್ಟಣದ ಸಿವಿಲ್ ನ್ಯಾಯಾಲಯಕ್ಕೆ (ಕಿರಿಯ ಶ್ರೇಣಿ) ನ್ಯಾಯಾಧೀಶರ ಕೊರತೆಯ ಸಮಸ್ಯೆ ಎದುರಾಗಿದ್ದು, ಒಬ್ಬರೇ ನ್ಯಾಯಾಧೀಶರು ಮುದ್ದೇಬಿಹಾಳ ಮತ್ತು ತಾಳಿಕೋಟೆ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆ ಜಾರಿಯಾಗಿರುವುದು ಸಾರ್ವಜನಿಕರು ಹಾಗೂ ವಕೀಲರ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮುದ್ದೇಬಿಹಾಳದಲ್ಲಿ ಒಂದೇ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಪ್ರಕರಣಗಳು ಬಾಕಿ ಉಳಿದಿವೆ. ಇಂತಹ ಸಂದರ್ಭದಲ್ಲಿ ಪ್ರತ್ಯೇಕ ನ್ಯಾಯಾಧೀಶರನ್ನು ನೇಮಕ ಮಾಡುವ ಬದಲು, ಅದೇ ನ್ಯಾಯಾಧೀಶರಿಗೆ ತಾಳಿಕೋಟೆ ನ್ಯಾಯಾಲಯದ ಜವಾಬ್ದಾರಿಯನ್ನೂ ನೀಡಲಾಗಿದೆ. ಪರಿಣಾಮವಾಗಿ ವಾರದಲ್ಲಿ ಮೂರು ದಿನಗಳ ಕಾಲ ಮುದ್ದೇಬಿಹಾಳ, ಮೂರು ದಿನಗಳ ಕಾಲ ತಾಳಿಕೋಟೆ ನಡುವೆ ಓಡಾಟ ನಡೆಸುತ್ತಾ ಎರಡೂ ನ್ಯಾಯಾಲಯಗಳ ಕಾರ್ಯಭಾರ ನಿಭಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ಈಗಾಗಲೇ ವಿಳಂಬವಾಗುತ್ತಿರುವ ಪ್ರಕರಣಗಳ ವಿಚಾರಣೆ ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಕಳೆದ ಹಲವು ವರ್ಷಗಳಿಂದ ಮುದ್ದೇಬಿಹಾಳದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸ್ಥಾಪನೆ ಹಾಗೂ ಪ್ರತ್ಯೇಕ ನ್ಯಾಯಾಧೀಶರ ನೇಮಕಕ್ಕೆ ಆಗ್ರಹ ಕೇಳಿಬರುತ್ತಿದ್ದರೂ, ನ್ಯಾಯಾಂಗ ಆಡಳಿತ ಈ ಕುರಿತು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ವಕೀಲರ ವಲಯದ ಅಭಿಪ್ರಾಯದಂತೆ, “ಒಂದೇ ನ್ಯಾಯಾಲಯದಲ್ಲಿ ೫ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇರುವಾಗ, ಅದೇ ನ್ಯಾಯಾಧೀಶರಿಗೆ ಮತ್ತೊಂದು ನ್ಯಾಯಾಲಯದ ಜವಾಬ್ದಾರಿ ನೀಡಿರುವುದು ನ್ಯಾಯ ವಿತರಣೆಯ ವೇಗಕ್ಕೆ ಹಿನ್ನಡೆಯಾಗಬಹುದು. ಮುದ್ದೇಬಿಹಾಳಕ್ಕೆ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಹಾಗೂ ಪ್ರತ್ಯೇಕ ನ್ಯಾಯಾಧೀಶರನ್ನು ನೇಮಿಸುವ ಅಗತ್ಯವಿದೆ” ಎಂದು ಒತ್ತಾಯಿಸಿದ್ದಾರೆ.
ಜನಸಂಖ್ಯೆ, ಪ್ರಕರಣಗಳ ಸಂಖ್ಯೆ ಮತ್ತು ನ್ಯಾಯಾಂಗದ ಮೇಲಿನ ಒತ್ತಡವನ್ನು ಗಮನಿಸಿದರೆ, ಮುದ್ದೇಬಿಹಾಳಕ್ಕೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮಂಜೂರು ಮಾಡುವುದು ಕಾಲದ ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.