Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮೀನಿಗೆ ತೆರಳಲು ರಸ್ತೆ ಇಲ್ಲದೆ ಅಣ್ಣೂರು ರೈತರ ಪರದಾಟ
(ರಾಜ್ಯ ) ಜಿಲ್ಲೆ

ಜಮೀನಿಗೆ ತೆರಳಲು ರಸ್ತೆ ಇಲ್ಲದೆ ಅಣ್ಣೂರು ರೈತರ ಪರದಾಟ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಡಿ ದಾರಿ ಜಾಗ ಗುರುತಿಸಲು ಸರ್ವೇ ಅಧಿಕಾರಿಗಳು ಮೀನಾಮೇಷ

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು ಎಂದು ಎಲ್ಲ ತಹಸೀಲ್ದಾರ್‌ಗಳಿಗೆ ಕಂದಾಯ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಒಂದು ವೇಳೆ ಅಕ್ಕಪಕ್ಕದ ಜಮೀನಿನ ಮಾಲೀಕರು ರೈತರಿಗೆ ತಿರುಗಾಡಲು ಅಡ್ಡಿಪಡಿಸಿದರೆ ತಾಲೂಕಿನ ತಹಸೀಲ್ದಾರ್‌ಗಳು ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವುಗೊಳಿಸಿ ರೈತರಿಗೆ ತಿರುಗಾಡಲು ಅವಕಾಶ ಕೊಡಬೇಕು.
ಆದರೆ ಹೆಚ್ ಡಿ ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ರೈತ ಜಗದೀಶ್ ಬಿನ್ ಚಂದ್ರಪ್ಪ ಹಾಗೂ ಶಿವಪ್ಪ ಕುಟುಂಬ, ತಮ್ಮ ಜಮೀನಿಗೆ ತೆರಳಲು ಕಾಲುದಾರಿ ಅಥವಾ ಬಂಡಿ ರಸ್ತೆ ಇಲ್ಲದೆ ಪರದಾಡುತ್ತಿದೆ. ಅಣ್ಣೂರು ಗ್ರಾಮದಲ್ಲಿ ಚಂದ್ರಪ್ಪ ಎಂಬುವವರಿಗೆ 38/3 ಸರ್ವೇ ನಂಬರ್ ನಲ್ಲಿ 2 ಎಕರೆ 30 ಗುಂಟೆ ಜಮೀನು ಇದೆ. ಆದರೆ ತಿರುಗಾಡಲು ರಸ್ತೆ ಇಲ್ಲ. ಬೇಸಿಗೆ ಕಾಲದಲ್ಲಿ ಪಕ್ಕದಲ್ಲಿರುವ ಚಿಕ್ಕಕೆರೆ ಮೂಲಕ ಜಮೀನಿಗೆ ತೆರಳುತ್ತಿದ್ದಾರೆ. ಆದರೆ ಕಾಲ ಕಳೆದಂತೆ ಅಕ್ಕಪಕ್ಕದ ಜಮೀನಿನ ಮಾಲೀಕರು, ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಹಿನ್ನೆಲೆ ಜಮೀನಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ಇನ್ನು ಮಳೆ ಬಂದು ಕೆರೆಗೆ ನೀರು ತುಂಬಿಕೊಂಡರೆ ಜಮೀನಿಗೆ ತೆರಳಲೂ ರಸ್ತೆಯೇ ಇಲ್ಲದಂತಾಗಲಿದೆ.
ಕರ್ನಾಟಕ ಭೂ ಕಂದಾಯ ನಿಯಮಗಳು 1996ರ ನಿಯಮ 59ರ ಅಡಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ’ ಕಾಯ್ದೆಯಡಿ ಬಂದಿದಾರಿ ಅಥವಾ ಕಾಲುದಾರಿ ಗುರುತು ಮಾಡಿ, ತಿರುಗಾಡಲು ಅವಕಾಶ ಮಾಡಿಕೊಡಬೇಕೆಂದು, ತಹಸೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾಧಿಕಾರಿಗೂ ಮನವಿ ಪತ್ರ ನೀಡಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ವೇ ಅಧಿಕಾರಿಗಳು, ಅಳತೆಗೆ ದಿನಾಂಕ ನಿಗದಿಪಡಿಸುತ್ತಾರೆ ಆದರೆ ಆ ದಿನ ಬಂದು ಅಳತೆ ಮಾಡದೇ ನೆಪವೊಡ್ಡಿ ಮುಂದೂಡತ್ತಲೇ ಬರುತ್ತಿದ್ದಾರೆ. ಹೀಗಾಗಿ ರಸ್ತೆ ಇಲ್ಲದೆ ಜಮೀನಿನಲ್ಲಿ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ. ಬೆಳೆಗಳನ್ನು ಬೆಳೆದರೂ ಸಾಗಿಸಲು ದಾರಿ ಇಲ್ಲದೆ ಪರಿತಪಿಸುವಂತಾಗಿದೆ. ಈಗಲಾದರೂ ತಹಸೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಬಂಡಿ ದಾರಿಗೆ ಜಾಗ ಗುರುತಿಸಿ, ತಿರುಗಾಡಲು ಅನುವು ಮಾಡಿಕೊಡಬೇಕೆಂದು ರೈತ ಜಗದೀಶ್ ಮನವಿ ಮಾಡಿದ್ದಾರೆ.

“ಕಳೆದ 20 ವರ್ಷಗಳಿಂದಲೂ ನಮ್ಮ ಕುಟುಂಬ ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಈ ಹಿಂದೆ ಕೆರೆ ಜಾಗ ವಿಶಾಲವಾಗಿದ್ದ ಹಿನ್ನೆಲೆ ಕೆರೆ ಪಕ್ಕದಲ್ಲೇ ರಸ್ತೆ ಮಾಡಿಕೊಂಡು ಜಮೀನಿಗೆ ತಿರುಗಾಡುತ್ತಿದ್ದೆವು. ಕಾಲಕ್ರಮೇಣ ಅಕ್ಕಪಕ್ಕದ ಜಮೀನಿನವರು ಕೆರೆ ಜಾಗವನ್ನೇ ಒತ್ತುವರಿ ಮಾಡಿಕೊಂಡಿರುವ ಪರಿಣಾಮ ನಮಗೆ ಇದೀಗ ತಿರುಗಾಡಲು ರಸ್ತೆಯೇ ಇಲ್ಲದಂತಾಗಿದೆ. ಹೀಗಾಗಿ ಜಮೀನು ಇದ್ದರೂ ಬೆಳೆಗಳನ್ನು ಬೆಳೆಯಲಾರದ ಪರಿಸ್ಥಿತಿ ನಿರ್ಮಾಣವಾಗಿದೆ.”

– ಶಿವಪ್ಪ ಅಣ್ಣೂರು
ರೈತ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.