Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ
(ರಾಜ್ಯ ) ಜಿಲ್ಲೆ

ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು & ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ ಸೂಕ್ತ ಅರಿವು ಮೂಡಿಸಬೇಕು. ಈ ಬಗ್ಗೆ ಜಾಗೃತಿ ಹಾಗೂ ಸಹಕಾರ ನೀಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ಧವಾಗಿದೆ ಎಂದು ಹೇಳಿದರು.
ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇರುವ ಕಾನೂನಾತ್ಮಕ ಕ್ರಮಗಳ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ತಿಳಿಸಿದರು.
ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಎಲ್ಲ ಇಲಾಖೆಗಳ ಹಾಗೂ ಸಾರ್ವಜನಿಕರ ಸಹಕಾರದ ಅಗತ್ಯವಿದೆ ಎಂದು ಕಾರ್ಮಿಕ ಅಧಿಕಾರಿಗಳಾದ ರಮೇಶ ಎಸ್ ಸುಂಬಡ ನುಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ರೀಮತಿ ನಿರ್ಮಲಾ ಎಚ್ ಸುರಪುರ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡು ಬಂದಲ್ಲಿ ೧೦೯೮ ಕರೆ ಮಾಡಬೇಕು. ಎಲ್ಲಾ ಮಕ್ಕಳು ಶಿಕ್ಷಣ ಪಡೆಯುವುದು ಅವರ ಹಕ್ಕಾಗಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕೆಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಕುರಿತು ಫಾದರ್ ಸುಮನ್ ಬಾಲು ಉಪನ್ಯಾಸ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿರಯ್ಯ ಸಾಲಿಮಠ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀಮತಿ ದೀಪಾ ಕಾಳೆ, ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಜಗದೇವಿ ಸಜ್ಜನ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಶ್ರೀಮತಿ ಮಹಾದೇವಿ ರಾಠೋಡ, ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಜಗದೇವಿ ಸಜ್ಜನ, ಕಾರ್ಮಿಕ ನಿರೀಕ್ಷಕರಾದ ಕುಮಾರ ಮಲ್ಲಿಕಾರ್ಜುನ ಸೇರಿದಂತೆ ಕಾರ್ಮಿಕ ಇಲಾಖೆ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಥಾ ಕಾರ್ಯಕ್ರಮಕ್ಕೆ ಚಾಲನೆ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಥಾ ಕಾರ್ಯಕ್ರಮ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಹರೀಶ.ಎ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ

ನಮ್ಮ ಮಕ್ಕಳ ಆಹಾರ ಹೀಗಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
  • ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ನಿರ್ಮೂಲನೆಗೆ ಸಾರ್ವಜನಿಕರು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ವಸತಿ ನಿಲಯ: ಬಾಡಿಗೆ ಕಟ್ಟಡಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.