Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ
(ರಾಜ್ಯ ) ಜಿಲ್ಲೆ

ಡಾ.ಆನಂದ ಅಂಬಲಿ ಅವರ ಆರೋಗ್ಯ ಸಂಬಂಧಿ ಕೃತಿ ಲೋಕಾರ್ಪಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್ ಆ್ಯಂಡ್ ಡೆಮೆನ್ಶಿಯಾ(Advance Care Planning for Alzheimer’s Disease and Dementia) ಕೃತಿಯನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಗುರುವಾರ ಬಿಡುಗಡೆ ಮಾಡಿದರು.
ವಿವಿಯಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಲಝೈಮರ್ಸ್ ಕಾಯಿಲೆ ಮತ್ತು ಡಿಮೆನ್ಶಿಯಾ ಪೀಡಿತರ ಆರೈಕೆಯಲ್ಲಿ ತೊಡಗಿರುವ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ರೋಗಿಗಳ ಆರೈಕೆದಾರರಿಗೆ ಈ ಪುಸ್ತಕ ಅತ್ಯಂತ ಉಪಯುಕ್ತವಾಗಲಿದೆ. ಡಿಮೆನ್ಶಿಯಾ ಆರೈಕೆಯಲ್ಲಿ ಬಳಸಲಾಗುವ ಮೂಲಭೂತ ಮಾಹಿತಿಯಿಂದ ಹಿಡಿದು ಆಧುನಿಕ ತಂತ್ರಜ್ಞಾನ ಮತ್ತು ಸಾಧನಗಳವರೆಗೆ ಸಮಗ್ರ ಮಾಹಿತಿಯನ್ನು ಈ ಪುಸ್ತಕ ಒಳಗೊಂಡಿದೆ ಎಂದು ಅವರು ಹೇಳಿದರು.
ಇದೇ ವೇಳೆ ಕೃತಿಯ ಲೇಖಕ ಮತ್ತು ಜೆರಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಆನಂದ ಪಿ. ಅಂಬಲಿ, ಫಾರ್ಮ್-ಡಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಸಿದ್ದಾರೂಢ ಎಂ. ಬಿರಾದಾರ ಹಾಗೂ ಕ್ಲಿನಿಕಲ್ ರಿಸರ್ಚ್ ಫೆಲೋ ಡಾ. ಬಸವರಾಜ ವಿ. ಅವರ ಕಾರ್ಯವನ್ನು ಅವರು ಶ್ಲಾಘಿಸಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿ, ಈ ಪುಸ್ತಕ ವಿಜಯಪುರ ಜಿಲ್ಲೆ ಮಾತ್ರವಲ್ಲ ದೇಶ-ವಿದೇಶಗಳಲ್ಲಿರುವ ಅಗತ್ಯವಿರುವ ಜನರಿಗೂ ತಲುಪಬೇಕು. ಮಾನವ ಆಯುಷ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿಮೆನ್ಶಿಯಾ ಮತ್ತು ಕ್ಯಾನ್ಸರ್‌ನಂತಹ ಕಾಯಿಲೆಗಳ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ. ಇಂಥ ಸಂದರ್ಭದಲ್ಲಿ ಜೆರಿಯಾಟ್ರಿಕ್ಸ್ ಮತ್ತು ಫಾರ್ಮ್- ಡಿ ವಿಭಾಗಗಳು ಅಗತ್ಯವಿರುವ ಕುಟುಂಬಗಳಿಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಮೂಲಕ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಒದಗಿಸಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿವಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಮತ್ತು ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಶೆಟ್ಟಿ, ನಿರ್ದೇಶಕ ಡಾ. ಆರ್. ಬಿ. ಕೊಟ್ನಾಳ, ಉಪಪ್ರಾಚಾರ್ಯ ಮತ್ತು ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪಗೋಳ, ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ಐಕ್ಯೂಎಸಿ ನಿರ್ದೇಶಕಿ ಡಾ. ಸುಮಂಗಲಾ ಪಾಟೀಲ, ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ. ರವಿ ಬಿರಾದಾರ, ಉಪಕುಲಸಚಿವ ಸತೀಶ ಪಾಟೀಲ ಸೇರಿದಂತೆ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.