ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಕಲಿಯುವ ವಯಸ್ಸಿನಲ್ಲಿ ಸರಿಯಾಗಿ ಕಲಿಯದೆ ಬೇರೆಯವರ ಕೈ ಕೆಳಗೆ ದುಡಿಯಲು ಹೋಗಿ ಶಿಕ್ಷಣದಿಂದ ವಂಚಿತರಾಗುವ ಅವಕಾಶವನ್ನು ಕಳೆದುಕೊಳ್ಳದೆ ಶಿಕ್ಷಣವನ್ನು ಪಡೆದು ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಿಕ್ಷಕ ಸಂಗನಬಸವ ಉಟಗಿ ಹೇಳಿದರು.
ಅವರು ಸಮೀಪದ ಕುಂಬಾರಹಳ್ಳ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ಸಂತಸದ ಕಲಿಕೆಯೊಂದಿಗೆ ಜೀವನ ರೂಪಿಸಿಕೊಳ್ಳಲು ಶ್ರಮಿಸಬೇಕು, ಇದರೊಂದಿಗೆ ತಂದೆ ತಾಯಿಯ ಋಣ ತೀರಿಸಬೇಕೆಂದು ಹೇಳಿದರು.
ಕು. ಚೈತ್ರ ತೇರದಾಳ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ನಾರಾಯಣ ಶಾಸ್ತ್ರಿ, ಶಿಕ್ಷಕರಾದ ಶಾರದಾ ಮಠ, ಆಸಿಪಾ ಭಾನು ಮೋಮಿನ್, ಸವಿತಾ ಬೆನಕಟ್ಟಿ, ಮಂಜುಳಾ ಕಡಕೋಳ, ಚಂದ್ರಕಾಂತ್ ಪೊಲೀಸ್, ಶಕುಂತಲಾ ಬಿರಾದಾರ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.

