Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
(ರಾಜ್ಯ ) ಜಿಲ್ಲೆ

ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇಶ ರಕ್ಷಕರ ಪಡೆ ಸಂಚಾಲಿತ ಅನ್ನ ಸ್ನೇಹಿ ಸೇವಾ ಬಳಗದಿಂದ 100ನೇ ವಾರ ಪೂರೈಸಿದ ಹಸಿವು ಮುಕ್ತ ಸೇವೆ | ನೂರಾರು ನಿರ್ಗತಿಕರಿಗೆ ಅನ್ನದಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶ ರಕ್ಷಕರ ಪಡೆ ಸಂಚಾಲಿತ ಅನ್ನ ಸ್ನೇಹಿ ಸೇವಾ ಬಳಗ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ “ಹಸಿವು ಮುಕ್ತ ಸೇವಾ ಕಾರ್ಯಕ್ರಮ”ದ 100ನೇ ವಾರವನ್ನು ಶುಕ್ರವಾರ ಯಶಸ್ವಿಯಾಗಿ ಆಚರಿಸಲಾಯಿತು.
ನಗರದ ವಿವಿಧ ಭಾಗಗಳಲ್ಲಿ ಬೇರೆ ಊರಿಗೆ ತೆರಳುವ ಪ್ರಯಾಣಿಕರು, ನಿರ್ಗತಿಕರು ಹಾಗೂ ಆಶ್ರಯಹೀನರಿಗೆ ಉಚಿತವಾಗಿ ಬಿಸಿ ಊಟ ವಿತರಿಸಲಾಯಿತು.
ಈ ಉದಾತ್ತ ಅನ್ನದಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ, ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತಗಳ ರಸ್ತೆ ಬದಿಯಲ್ಲಿ ವಾಸಿಸುವ ನೂರಾರು ಜನರನ್ನು ದೇಶ ರಕ್ಷಕರ ಪಡೆ ಸ್ವಯಂಸೇವಕರು ಖುದ್ದಾಗಿ ಭೇಟಿ ಮಾಡಿ ಗೌರವಪೂರ್ವಕವಾಗಿ ಸಿದ್ಧಪಡಿಸಿದ ಆಹಾರವನ್ನು ವಿತರಿಸಿದರು.
ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಖ್ಯಾತ ಮಧುಮೇಹ ತಜ್ಞ ಡಾ. ಬಾಬು ರಾಜೇಂದ್ರ ನಾಯಿಕ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ್ ಹಾಗೂ ಬಂದೇನವಾಜ್ ಬೀಳಗಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಸ್ಥಾಪಕ ರೋಹನ್ ಆಪ್ಟೆ, “ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ ಅನ್ನ ಸ್ನೇಹಿ ಸೇವಾ ಬಳಗ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಹಸಿದವರ ಹೊಟ್ಟೆ ತುಂಬಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ” ಎಂದು ಹೇಳಿದರು.
ಸಂಘಟನೆಯ ಅಧ್ಯಕ್ಷ ಆಕಾಶ ಇಂಡಿ ಮಾತನಾಡಿ, “ಹಸಿದವರಿಗೆ ಅನ್ನ ನೀಡುವುದಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ. ಈ ಸೇವಾ ಕಾರ್ಯವನ್ನು ಚಿರಸ್ಥಾಯಿಯಾಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲೂ ಇಂತಹ ಮಾನವೀಯ ಸೇವೆಗಳು ನಿರಂತರವಾಗಿ ಮುಂದುವರಿಯಲಿವೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೇಶ ರಕ್ಷಕರ ಪಡೆಯ ವಿಕ್ರಮ್ ತಂಬೇಕರ, ಜಗದೀಶ್ ರುಗಿಮಠ, ಕಿರಣ್ ಕೂಳುರಗಿ, ಶಶಿ, ಸುಜಿತ್, ಕೃಷ್ಣ, ಶಶಿಧರ, ಮುತ್ತು, ಮೈಬುಬ, ಮುಸ್ತಾಕ್, ಶಾಂತು, ಸಂತೋಷ, ಮಹಾಂತೇಶ್, ಪ್ರಕಾಶ, ವಿನಾಯಕ, ಸಾಗರ, ವಿರೇಶ್, ವಿನೋದ್ ಪತ್ತಾರ ಸೇರಿದಂತೆ ಅನ್ನ ಸ್ನೇಹಿ ಸೇವಾ ಬಳಗದ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಹಾಗೂ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.