ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿ, ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿದೆ.
ನ್ಯಾಯವಾದಿ ಅಶೋಕ ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ಪೀಠವು, ಅರ್ಜಿದಾರರ ಯಾವುದೇ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿಲ್ಲ, ಹೀಗಾಗಿ ಅರ್ಜಿಯು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿತು.
‘ಮೋದಿ’ ಉಪನಾಮ ಕುರಿತು ಟೀಕೆಗಾಗಿ ಸಂಬಂಧಿಸಿದ ಪ್ರಕರಣದಲ್ಲಿ ದೋಷ ನಿರ್ಣಯಕ್ಕೆ ಸರ್ವೋಚ್ಚ ನ್ಯಾಯಾಲಯವು ಆ.4ರಂದು ತಡೆಯಾಜ್ಞೆ ನೀಡಿದ ಬಳಿಕ ಲೋಕಸಭಾ ಸಚಿವಾಲಯವು ರಾಹುಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತ್ತು.
ಮಾರ್ಚ್ 2023ರಲ್ಲಿ ಕೆಳಮನೆಯಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕನನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಲಾಯಿತು.
Related Posts
Add A Comment