Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ
(ರಾಜ್ಯ ) ಜಿಲ್ಲೆ

ಬಸವಾದಿ ಶರಣರ ಹಿಂದೂ ಸಮಾವೇಶ ಬಸವಣ್ಣನಿಗೆ ವಿರೋಧಿ ನಡೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಬಸವಾದಿ ಚಿಂತಕ ಬಸನಗೌಡ ಹರನಾಳ ಅಸಮಾಧಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದರೂ ಸಹ ಕನೇರಿ ಶ್ರೀಗಳು ಬಸವಾದಿ ಶರಣರನ್ನು ನಿಂದಿಸುವ, ವಚನಗಳ ಸಾರವನ್ನು ಅಪಾರ್ಥ ಮಾಡುವ ಹಾಗೂ ಬಸವಾದಿ ಅನುಯಾಯಿಗಳನ್ನು ಬಸವ ತಾಲಿಬಾನಿ ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆಯನ್ನು ಮಾಡುತ್ತಿದ್ದಾರೆ ಎಂದು ಬಸವಾದಿ ಚಿಂತಕ ಬಸನಗೌಡ ಹರನಾಳ ಅಸಮಾಧಾನ ಹೊರಹಾಕಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಯಾಗಿ ಬಸವಾದಿ ಚಿಂತಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ, ಬಸವಾದಿ ಶರಣರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕೋರ್ಟ್ ಸಹ ಸ್ವಾಮೀಜಿಗಳಿಗೆ ಛಿಮಾರಿ ಹಾಕಿದೆ, ಆದರೂ ಸಹ ಶರಣರ ವಚನ ತಿರುಚುವುದು, ಬಸವಾದಿ ಶರಣರನ್ನು ಬೈಯುತ್ತಿದ್ದಾರೆ.
ಬಸವ ತಾಲಿಬಾನಿ ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡುತ್ತಲೇ ಇದ್ದಾರೆ, ನಿಂದನೆ ಮಾಡುವುದು ಸಲ್ಲದ ಕೆಲಸ, ಮಾಡುತ್ತಿರುವ ಉದ್ದೇಶ ಸರಿಯಿಲ್ಲ, ಬಸವಾದಿ ಶರಣರ ಹಿಂದೂ ಸಮಾವೇಶ ಮಾಡುತ್ತಿರುವುದು ಬಸವಣ್ಣನಿಗೆ ವಿರೋಧಿ ನಡೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಎಲ್ಲ ಜಿಲ್ಲೆಗಳಲ್ಲಿ ಕನೇರಿ ಶ್ರೀಗಳ ವಿರುದ್ದ ಪ್ರತಿಭಟನೆ ಆಯೋಜಿಸಲಾಗಿದೆ. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಗಳಿಗೆ ಮನವಿ, ಅವರಿಗೆ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಬಾರದು ಎಂದು ವಿವರಿಸಿದರು.
ನಿಂದನೆ ಮಠಾಧೀಶರು ಮಾಡುವ ಕೆಲಸವಲ್ಲ. ಅವರು ತಮ್ಮ ಮಠದಲ್ಲಿ ಪ್ರವಚನ ನೀಡಲಿ. ಅದು ಬಿಟ್ಟು ಹಿಂದೂ ಶರಣ ಸಮಾವೇಶ ಹೆಸರಲ್ಲಿ ವಚನಗಳ ತಿರುಚುವುದು, ಬಸವಪರ ಸಂಘಟನೆಗಳು, ಸ್ವಾಮೀಜಿ ಹಾಗೂ ಮುಖ್ಯಮಂತ್ರಿಗಳನ್ನೂ ಬೈಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ವೈದ್ಯ ಡಾ.ರವಿಕುಮಾರ್ ಬಿರಾದಾರ ಮಾತನಾಡಿ, ಜೂನ್ ೨೮ರಂದು ಬಸವ ಕಲ್ಯಾಣದಲ್ಲಿ ಸಮಾವೇಶಕ್ಕೆ ಮುಂದಾಗಿದ್ದಾರೆ. ಹಿಂದೂ ಶಿವಶರಣರ ಸಮಾವೇಶ ಎಂದು ಕಲಬೆರಕೆ ಸಮಾವೇಶ ಮಾಡಬೇಡಿ. ಪ್ರತ್ಯೇಕ ಹಿಂದೂ ಸಮಾವೇಶ ಮಾಡಿ, ಇಲ್ಲವೇ ಶಿವಶರಣರ ಸಮಾವೇಶವನ್ನಾದರೂ ಮಾಡಿ ಎಂದರು.
ಕನ್ನೇರಿ ಸ್ವಾಮೀಜಿ ಅಸಂಬದ್ಧ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ, ಕನೇರಿ ಸ್ವಾಮೀಜಿ ಅವರನ್ನು ಬಿಜೆಪಿ-ಸಂಘಪರಿವಾರದವರು ಬಿಜೆಪಿ, ಆರ್‌ಎಸ್‌ಎಸ್ ದುರ್ಬಳಕೆ ಮಾಡಿಕೊಳ್ಳುತ್ತಿವೆ, ಸ್ವಾಮೀಜಿ ಇಷ್ಟು ವರ್ಷಗಳ ಕಾಲ ಯಾಕೆ ಸುಮ್ಮನೆ ಇದ್ದರು. ಈಗ ಯಾಕೆ ಹಿಂದೂ, ಲಿಂಗಾಯತ ಬಗ್ಗೆ ಮಾತನಾಡುತ್ತಿದ್ದಾರೆ?, ಇದರ ಉದ್ದೇಶವೇನು?, ಇದನ್ನು ಗಮನಿಸಿದರೆ ದ್ವೇಷ ಬಿತ್ತುವ ಹುನ್ನಾರ ಅಡಗಿದೆ ಎಂದರು.
ಬಸವಣ್ಣನ ಚಿಂತನೆಯು ಜಾಗತಿಕವಾಗಿ ಬೆಳೆಯುತ್ತಿದೆ. ಇದನ್ನು ದುರ್ಬಳಕೆ ಮಾಡಿಕೊಳ್ಳಲು ಬಸವಣ್ಣನ ಹೆಸರು ಹೇಳುತ್ತಿದ್ದಾರೆ. ಇದಕ್ಕಾಗಿ ಶರಣರ ವಚನಗಳನ್ನು ತಿರುಚಿ ಹೇಳುವ ಕೆಲಸ ಮಾಡುತ್ತಿದ್ದಾರೆ. ಬಸವಣ್ಣ ಹಿಂದೂ ಧರ್ಮವನ್ನು ತಿರಸ್ಕರಿಸಿದರು. ಆಗಲೇ ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಆದರೆ, ಸಮಾಜ ಸುಧಾರಣೆ ಮಾಡಿದರು, ಹಿಂದೂ ಧರ್ಮವನ್ನು ಪ್ರತಿಪಾದಿಸಿದರು ಎಂದರು.
ಹಿಂದೂ ಧರ್ಮವನ್ನು ಬಸವಣ್ಣ ಪ್ರತಿಪಾದಿಸಿದ್ದೇ ನಿಜವಾದರೆ, ಲಕ್ಷಾಂತರ ವಚನಗಳನ್ನು ಸುಟ್ಟಿದ್ದು ಯಾಕೆ, ಶರಣರನ್ನು ಯಾಕೆ ಕೊಲೆ ಮಾಡಲಾಯಿತು. ಅವರನ್ನು ಕೊಂದಿದ್ದು ಯಾರು? ಎಂದು ಪ್ರಶ್ನಿಸಿದರು.
ಮುಖಂಡರಾದ ಪ್ರಭುಗೌಡ ಬಿರಾದಾರ, ಚೆನ್ನು ಕಟ್ಟಿಮನಿ, ಅಡಿವೆಪ್ಪ ಸಾಲಗಲ್ಲ, ನಾಗರಾಜ ಲಂಬು ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.