Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಛಲವಿದ್ದವರು ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ
(ರಾಜ್ಯ ) ಜಿಲ್ಲೆ

ಛಲವಿದ್ದವರು ಮಾತ್ರ ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಾಧನೆಯ ಹಾದಿ ಸುಗಮವಲ್ಲ. ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾರ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಅಂಜುಮನ್ ಇ-ಇಸ್ಲಾಂ ಶಿಕ್ಷಣ ಸಂಸ್ಥೆ, ನ್ಯೂ ಇರಾ ವಿಜ್ಞಾನ ಪಪೂ ಕಾಲೇಜು ಹಾಗೂ ಪ್ರಾಢಶಾಲೆ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸ್ವಾಗತ ಸಮಾರಂಭಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯೂ ಹೆಮ್ಮರವಾಗಿ ಬೆಳೆಯುತ್ತಿದ್ದು, ಸೌಹಾರ್ದತೆಗೆ ಹೆಸರು ವಾಸಿಯಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಕ್ರೀಡೆ, ಸಂಸ್ಕಾರ ಹಾಗೂ ಇತರೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದುವರೆಯಲಿ. ಈಗಾಗಲೇ ಈ ಶಿಕ್ಷಣ ಸಂಸ್ಥೆಗೆ ಸಭಾಭವನ ನಿರ್ಮಿಸಲು ರೂ.೫೦ಲಕ್ಷ ಅನುದಾನ ನೀಡಲಾಗಿದೆ. ಹೆಚ್ಚುವರಿಯಾಗಿ ಮುಂಬರುವ ದಿನಮಾನಗಳಲ್ಲಿ ಎರಡನೇ ಹಂತಕ್ಕೆ ಮತ್ತೇ ರೂ.೫೦ಲಕ್ಷ ಅನುದಾನ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ.
ಈ ವೇಳೆ ಬೆಂಗಳೂರಿನ ಪಾಲ್ಕನ್ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಅಬ್ದುಲ್ ಶುಭಾನ್ ಹಾಗೂ ವಿಜಯಪುರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎ.ಉಪ್ಪಾರ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ಗುರಿ ಹೊಂದಿದ ಅಧ್ಯಯನದ ಮೂಲಕ ಉತ್ತಮ ಸಾಧನೆ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಮಾಡಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು. ನಿಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ​೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ೫೦ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳನ್ನು ಹಾಗೂ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ೧೫೨ನೆಯ ರ‍್ಯಾಂಕ್ ಪಡೆದ ಶರ್ವಾಣಿ ಹಿರೇಮಠ ಅವರಿಗೆ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಪಾಟೀಲ ಗಣಿಹಾರ ಮಾತನಾಡಿದರು. ಸಮಾರಂಭದ ಸಾನಿಧ್ಯವನ್ನು ರಾಂಪುರ ಪಿಎ ಗ್ರಾಮದ ಆರೂಢ ಶ್ರೀಮಠದ ನಿತ್ಯಾನಂದ ಮಹಾರಾಜರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಜುಮನ್ ಇ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಎ.ಎ.ದುದನಿ, ಮಹಿಬೂಬ ಹಸರಗುಂಡಗಿ, ಎ.ಆಯ್.ಮುಲ್ಲಾ, ಅಬ್ದುಲರಹೀಮ್ ದುದನಿ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಭೋದಕ-ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕ ಆರ್.ಎಂ.ನದಾಫ್ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.