ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಕೆರೆಯ ಸೌಂದರ್ಯೀಕರಣಕ ಮಾಡುವ ಉದ್ದೇಶದಿಂದ ಅಮೃತ ೨ ಯೋಜನೆ ಅಡಿಯಲ್ಲಿ ₹೩ ಕೋಟಿ ೪ಲಕ್ಷ ಅನುದಾನವು ರಾಜ್ಯ ಸರಕಾರದಿಂದ ಮಂಜೂರಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಪತ್ರಿಕೆಗೆ ತಿಳಿಸಿದ್ದಾರೆ.
ಈ ಅನುದಾನವನ್ನು ಸಾರ್ವಜನಿಕ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ವಿವಿಧ ಕಾಮಗಾರಿಗಳಿಗೆ ಬಳಸಲಾಗುವುದು. ಅಮೃತ ೨ ಯೋಜನೆಯಡಿ ಬಿಡುಗಡೆಯಾದ ಅನುದಾನದಿಂದ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದ್ದು, ಸಾರ್ವಜನಿಕರ ಬಹುಕಾಲದ ಬೇಡಿಕೆಗಳಿಗೆ ಸ್ಪಂದನೆ ದೊರೆಯಲಿದೆ. ಯೋಜನೆಯ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.

