Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ

ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ

ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಮೈಸೂರಿನ ಪುರಭವನದ ಮುಂದೆ ಎಸ್ ಚಿಕ್ಕಮಾದು ಅಭಿಮಾನಿ ಬಳಗದ ನೇತೃತ್ವದಲ್ಲಿ ನಾಯಕ ಸಮುದಾಯ ಬೃಹತ್ ಪ್ರತಿಭಟನೆ ಮಾಡಲಿದೆ ಎಂದು ಮೈಸೂರು- ಚಾಮರಾಜನಗರ ಜಿಲ್ಲೆ ಎಸ್ ಚಿಕ್ಕಮಾದು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದ ವಾಲ್ಮೀಕಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ಯಾತನಹಳ್ಳಿ ನಾಗರಾಜು. ಅನಿಲ್ ಚಿಕ್ಕಮಾದು ಅವರು ಹಳೇ ಮೈಸೂರು ಭಾಗದಲ್ಲಿ ಎಸ್ಟಿ ಸಮುದಾಯದ ಪ್ರಭಾವಿ ಶಾಸಕರು. ತನ್ನದೇ ಆದ ವರ್ಚಸ್ಸು ಹೊಂದಿರುವ ಪ್ರಮುಖ ನಾಯಕರು. ಪ್ರತಿ ಚುನಾವಣೆಯಲ್ಲೂ ಶೇ. 70 ರಷ್ಟು ನಾಯಕ ಸಮುದಾಯ ಕಾಂಗ್ರೆಸ್ ಬೆಂಬಲಿಸುತ್ತಾ ಬರುತ್ತಿದೆ. ಮೈಸೂರು ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ 6 ಲಕ್ಷ ನಾಯಕ ಸಮುದಾಯದ ಜನಸಂಖ್ಯೆ ಇದ್ದು, 8 ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಕಳೆದ 30 ವರ್ಷಗಳಿಂದಲೂ ಈ ಭಾಗದಲ್ಲಿ ನಮ್ಮ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಿಲ್ಲ. ಹೀಗಾಗಿ ಈ ಬಾರಿ ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಶಾಸಕರಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಅಥವಾ ಕ್ರೀಡಾ ಇಲಾಖೆ ಖಾತೆ ಸಿಗುವ ಭರವಸೆ ಇದೆ. ಒಂದು ವೇಳೆ ನಮ್ಮ ನಿರೀಕ್ಷೆ ಹುಸಿ ಮಾಡಿದರೆ, ನಾಯಕ ಸಮುದಾಯ ಬೀದಿಗಿಳಿಯಲಿದೆ. ತಾಲೂಕು ಮಟ್ಟ, ಜಿಲ್ಲಾ ಕೇಂದ್ರಗಳಲ್ಲೂ ಉಗ್ರ ಹೋರಾಟ ಮಾಡಲಿದೆ. ಈ ಸರ್ಕಾರಕ್ಕೆ ಇನ್ನು ಎರಡು ವರ್ಷ ಅಧಿಕಾರ ಇರುವುದರಿಂದ ಸದ್ಯ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ. 2028ಕ್ಕೆ ಚುನಾವಣೆಯಲ್ಲಿ ಅನಿಲ್ ಚಿಕ್ಕಮಾದು ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ನಮ್ಮ ನಾಯಕ ಸಮುದಾಯ ನಿರ್ಧಾರ ಮಾಡಲಿದೆ ಎಂದು ಹೇಳಿದರು.
ಮೈಸೂರು- ಚಾಮರಾಜನಗರ ಜಿಲ್ಲೆ ಎಸ್ ಚಿಕ್ಕಮಾದು ಅಭಿಮಾನಿ ಬಳಗದ ಕಾರ್ಯದರ್ಶಿ ಮಹೇಶ್ ನಾಯಕ, ಗೌರವಾಧ್ಯಕ್ಷ ದೊರೆಸ್ವಾಮಿ ನಾಯಕ, ಟಿ. ಅಂಕನಾಯಕ, ಯಜಮಾನರಾದ ನಾಗರಾಜ, ಎಸ್ಸಿ ಎಸ್ಟಿ ಜಾಗೃತಿ ಸಮಿತಿಯ ಸದಸ್ಯ ವೇಣು, ನಿರ್ದೇಶಕರಾದ ಬೆಟ್ಟ ನಾಯಕ, ಅಗತ್ತೂರು ಅಂಕನಾಯಕ, ನಿಂಗರಾಜು , ಬೈರನಾಯಕ, ಶ್ರೀನಿವಾಸ್, ಮಾಗುಡಿಲು ಮಣಿ, ರಾಮ ನಾಯಕ, ಜಯಪ್ಪ, ಗೋವಿಂದ, ಚೆಲುವರಾಜು, ದೊಡ್ಡವೀರ ನಾಯಕ, ದಾಸನಾಯಕ, ನಾಗನಾಯಕ, ಕಾಳಿಂಗ ನಾಯಕ, ಕೃಷ್ಣ, ಬೀರೇಶ್ ಮಡಿವಾಳ್, ಸಿದ್ದು, ಕುಮಾರ್, ಕೆಂಪ, ಗೋಪಾಲ್, ರವಿಶಂಕರ್, ಕುಮಾರ್, ಚೆನ್ನನಾಯಕ, ಪುರುಷೋತ್ತಮ್, ವಕೀಲ ಲೋಕೇಶ್ ಸೇರಿದಂತೆ ನಾಯಕ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ

ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ

ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ

ಸಿಂದಗಿಯಲ್ಲಿರುವ ವೀರಸೌಧ ಅಭಿವೃದ್ಧಿಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿರುವ ವೀರಸೌಧ ಅಭಿವೃದ್ಧಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ ಸೌಹಾರ್ದ ಸಂಘಕ್ಕೆ ರೂ.7.17 ಕೋಟಿ ನಿವ್ವಳ ಲಾಭ
    In (ರಾಜ್ಯ ) ಜಿಲ್ಲೆ
  • ಕಬ್ಬಿಗೆ ದರ ಘೋಷಣೆ ಆಗುವವರೆಗೂ ಕಾರ್ಖಾನೆ ಆರಂಭ ಬೇಡ
    In (ರಾಜ್ಯ ) ಜಿಲ್ಲೆ
  • ಕಡಿಮೆ ಪರಿಹಾರ: ಸರ್ಕಾರದ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಸಣಕ್ಕೆ ದಾರಿ ತೋರಿಸುವ ವ್ಯಸನ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಬಸ್ಟ್ಯಾಂಡ್ ಕಾ ರಾಜಾ ಗಣಪತಿಗೆ ಭಕ್ತಿ–ಭಾವದ ವಿದಾಯ
    In (ರಾಜ್ಯ ) ಜಿಲ್ಲೆ
  • ₹2,500 ಪರಿಹಾರ ರೈತರಿಗೆ ಅವಮಾನ :ಹೂಗಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.