Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಸಂಗ-ಅಂತರಂಗ ಅರಿಯಲು ಪೂರಕ :ದೃವ ಕುಲಕರ್ಣಿ
(ರಾಜ್ಯ ) ಜಿಲ್ಲೆ

ಸತ್ಸಂಗ-ಅಂತರಂಗ ಅರಿಯಲು ಪೂರಕ :ದೃವ ಕುಲಕರ್ಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವನದಲ್ಲಿ ಅತಿಯಾದ ಆಸೆಗಳನ್ನು ತ್ಯಜಿಸಿ, ಸಾತ್ವಿಕ ಚಿಂತನೆ, ಭಕ್ತಿ ಮತ್ತು ಧ್ಯಾನದ ಮೂಲಕ ನಮ್ಮ ಮನಸ್ಸನ್ನು ಹತೋಟಿಯಲ್ಲಿಡಬೇಕು. ಭಗವದ್ಗೀತೆ ಮತ್ತು ಶರಣರ ವಚನಗಳ ಸಾರ-ಸಂದೇಶವು ನಮಲ್ಲಿರುವ ಅರಿಷಡ್ವರ್ಗಗಳನ್ನು ತ್ಯಜಿಸುತ್ತಾ, ಅಂಧಕಾರವೆಂಬ ಅಜ್ಞಾನವನ್ನು ತೊಲಗಿಸಿ ಸುಜ್ಞಾನದ ಸುಧೆ ಬೆಳಗುವಂತೆ ಮತ್ತು ಸಮಚಿತ್ತತೆಯಿಂದ ಬದುಕಲು ಮಾರ್ಗದರ್ಶನ ನೀಡುತ್ತವೆ ಎಂದು ಸನಾತನ ಸಾಧಕರಾದ ದೃವ ಕುಲಕರ್ಣಿ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಅಲ್-ಅಮೀನ್ ಎದುರಿಗೆ ಇರುವ ಎನ್.ಜಿ.ಓ. ಕಾಲನಿಯ ಆಂಜನೇಯ ದೇವಸ್ಥಾನದಲ್ಲಿ ಜರುಗಿದ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ಲೌಕಿಕ ಜಂಜಾಟದಿಂದ ಮುಕ್ತಿ ಪಡೆದು ಜೀವನದ ಕೊನೆಯ ಉಸಿರಿರುವರೆಗೂ ಸದಾ ಸಹಾಯ, ಸಹಕಾರ, ಸಮತಾಭಾವ, ಸಮನ್ವಯತೆ ಮತ್ತು ಸಮಷ್ಠಿಭಾವಗಳೆಂಬ ಪಂಚ ಸದ್ಗುಣಗಳನ್ನು ಅನುಪಾಲಿಸಬೇಕು. ನಮ್ಮ ಬದುಕಿನ ನಿಜವಾದ ಅಸ್ತಿತ್ವನ್ನು ಅರಿತುಕೊಂಡು ಅಧ್ಯಾತ್ಮ, ಸತ್ಸಂಗ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಮಾಜದ ಒಳಿತಿಗಾಗಿ ದುಡಿಯುವುದೇ ಜೀವನದ ಸಾರ್ಥಕ್ಯವನ್ನು ಮನಗಾಣಬೇಕು. ಸತ್ಸಂಗವು ವ್ಯಕ್ತಿಯ ಆಲೋಚನೆ, ನಡುವಳಿಕೆ ಮತ್ತು ಜೀವನದ ದೃಷ್ಟಿಕೋನವನ್ನು ಧನಾತ್ಮಕವಾಗಿ ಬದಲಿಸುವ ಶಕ್ತಿಯನ್ನು ಹೊಂದಿವೆ ಎಂದು ಹೇಳಿದರು.
ಪ್ರೊ. ಎಂ.ಎಸ್.ಖೊದ್ನಾಪೂರ ಮಾತನಾಡಿ, ವಚನ ಸಾಹಿತ್ಯ ಪ್ರತಿಯೊಬ್ಬರ ಬದುಕಿಗೆ ಹಾಸುಹೊಕ್ಕಾಗಿದೆ. ವಚನ ಮಾತಿನ ಮೂಲವಾಗಿದ್ದು, ಸಮಾಜದಲ್ಲಿ ಸಾಮಾಜಿಕ ಮೌಲ್ಯ ಎತ್ತಿ ಹಿಡಿಯುವ ಶಕ್ತಿಯನ್ನು ಹೊಂದಿದೆ. ನಾವೆಲ್ಲರೂ ಶರಣರ ವಚನಗಳಲ್ಲಿ ತಿಳಿಸಿರುವ ಸಂದೇಶದಂತೆ, ಪ್ರತಿಯೊಬ್ಬರೂ ಭಕ್ತಿ ಮಾರ್ಗ, ಜ್ಞಾನ ಮಾರ್ಗ ಮತ್ತು ಕಾಯಕ ಮಾರ್ಗದಲ್ಲಿ ಪ್ರಾಮಾಣಿಕವಾಗಿ ನಡೆದು ಜೀವನದಲ್ಲಿ ಸಾರ್ಥಕತೆ ಹೊಂದಬೇಕು. ಪೋಷಕರು ತಮ್ಮ ಮಕ್ಕಳನ್ನು ಇಂತಹ ಸತ್ಸಂಗಗಳಿಗೆ ಕರೆತಂದು ಅವರಿಗೂ ಶಿಕ್ಷಣ ಜತೆಗೆ ಜೀವನ ಮೌಲ್ಯ, ಸಮಾಜದ ಋಣ ಮತ್ತು ಬದುಕಿನ ಸತ್ಯದ ಬಗ್ಗೆ ಅರಿವು ಮೂಡಿಸುವಂತಾಗಬೇಕು ಅಂದಾಗ ಮಾತ್ರ ನಾಳಿನ ನಮ್ಮ ಸಮಾಜದಲ್ಲಿ ಪರಿವರ್ತನೆ ಮತ್ತು ಸುಸ್ಥಿರತೆಯನ್ನು ಸಾಧಿಸಲು ಸಾಧ್ಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಅಧ್ಯಕ್ಷ ಸಂತೋಷ ಪಾಟೀಲ, ಹಿರಿಯರಾದ ಭೀಮರಾಯ ಬಿರಾದಾರ, ಬಾಬು ಕೋಲಕಾರ, ನಾನಾಸಾಬ ಕೂಟನೂರ, ಶಿವಾನಂದ ಬಿಜ್ಜರಗಿ, ಶ್ರೀರಾಂ ದೇಶಪಾಂಡೆ, ರಮೇಶ ಕುಮಟಗಿ, ವೆಂಕಟೇಶ ಹೊಸಮನಿ, ಎಸ್.ಎಸ್.ಬಶೆಟ್ಟಿ, ಆರ್.ಬಿ.ಪೂಜಾರಿ, ಗಂಗಾಧರ ಚಾಬೂಕಸವಾರ, ಬಿ.ಆರ್.ಬಿರಾದಾರ, ಎಸ್.ಬಿ.ಪೂಜಾರಿ, ವಿನಾಯಕ ಕಿಚಡಿ, ಆರ್.ಎಸ್.ತಳವಾರ ಇನ್ನಿತರು ಸಹ ಉಪಸ್ಥಿತರಿದ್ದರು.
ಈ ಸತ್ಸಂಗದಲ್ಲಿ ನವರಸಪುರದ ನೂರಾರು ಮಕ್ಕಳು, ಮಹಿಳೆಯರು, ಹಿರಿಯರು ಸೇರಿದಂತೆ ಭಾಗವಹಿಸಿದ್ದರು. ನಂತರ ಸಾಮೂಹಿಕ ಹನುಮಾನ ಚಾಲೀಸ್ ಪಠಣ ಮತ್ತು ಮಹಾಮಂಗಳಾರತಿ ನೆರವೇರಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.