ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ-ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಅಲೆಮಾರಿ-ಅರೆ ಅಲೆಮಾರಿ ಜನಾಂಗದ ವಿದಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆಗಸ್ಟ್ ೩೧ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‌ಸೈಟ್ https://ssp.postmatric.karnataka.gov.in/ ವೀಕ್ಷಿಸಬಹುದಾಗಿದೆ.ಯೋಜನೆಗಳ ವಿವರ, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳಿಗಾಗಿ https://bcwd.karnataka.gov.in/ ವೆಬ್‌ಸೈಟ್ ಅನ್ನು ಹಾಗೂ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಅನ್ನು ಹಾಗೂ ಇ-ಮೇಲ್ bcwdhelpline@gmail.comಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿವೇತನ ಸಂಬAಧಿತ ತಾಂತ್ರಿಕ ಸಹಾಯಕ್ಕಾಗಿ ೧೯೦೨ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
