ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಸ್ತುತ ಸಮುದಾಯದಿಂದ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಪುಲಕೇಶಿ ಕ್ಷೇತ್ರದ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡದ ವೆಂಕಟೇಶ್ ಅವರು ಸಂಘಟನೆ ಹಾಗೂ ಸಾರ್ವಜನಿಕ ಜೀವನದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಇವರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯದ ಸಂದೇಶ ಸಾರಬೇಕು ಎಂದು ಭೋವಿ ವಡ್ಡರ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗುತ್ತಿರುವ ಹೊಸ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ತತ್ವದಡಿ ಭೋವಿ ಸಮುದಾಯಕ್ಕೆ ಅವಕಾಶ ದೊರೆಯಬೇಕು. ಜತೆಗೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಬೇಕಾದರೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಪುಲಕೇಶಿ ಕ್ಷೇತ್ರದ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡದ ವೆಂಕಟೇಶ್ ಈ ಮೂವರಲ್ಲಿ ಯಾರಿಗಾದರು ಸಚಿವ ಸ್ಥಾನ ಕಲ್ಪಿಸಬೇಕು ಎಂದು ಭೋವಿ ಸಮಾಜದ ಮುಖಂಡರಾದ ಮುತ್ತಪ್ಪ ಪಾತ್ರೋಟ, ಸುನಂದಾ ಯಂಪೂರೆ, ಭೀಮಾಶಂಕರ ಯಂಪೂರೆ, ದಿಲೀಪ ಆಲಕುಂಟೆ, ಸಚೀನ ಮಂಜಾಳಕರ, ದಯಾನಂದ ಗೊಳಸಾರ ಸೇರಿದಂತೆ ಅನೇಕರು ಸರಕಾರಕ್ಕೆ ಒತ್ತಾಯಿಸಿದ್ದಾರೆ.

