ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಾರಿಗೆ ಇಲಾಖೆಯಲ್ಲಿ ೧೯೯೧-೯೨ ರಿಂದ ೨೦೨೧-೨೨ (೩೧-೦೩-೨೦೨೨)ರವರೆಗೆ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳ ಉಲ್ಲಂಘನೆಗೆ ಸಂಬAಧಿಸಿ ದಾಖಲಾಗಿರುವ ಮತ್ತು ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.೫೦ ರಿಯಾಯಿತಿ ನೀಡಲಾಗಿದೆ. ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಅವಕಾಶ ಕಲ್ಪಿಸಲಾಗಿದ್ದು,ದಿನಾಂಕ:೨೧-೦೬-೨೦೨೬ರಿಂದ ೧೦-೦೭-೨೦೨೬ರವರೆಗೆ ಪ್ರಕರಣಗಳನ್ನು ಇತ್ಯರ್ತಪಡಿಸಿಕೊಳ್ಳಲು ಕಾಲಾವಕಾಶ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ವಾಹನ ಮಾಲೀಕರು ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದ ಶೇ.೫೦ರಷ್ಟು ಹಣವನ್ನು ಪಾವತಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ದಂಡದ ಮೊತ್ತ ಪಾವತಿಸಲು ಯಾವುದೇ ಆನ್‌ಲೈನ್ ವ್ಯವಸ್ಥೆ ಅಥವಾ ಲಿಂಕ್ ಇರುವುದಿಲ್ಲ. ವಾಹನ ಮಾಲೀಕರು ಕಚೇರಿ ಅವಧಿಯಲ್ಲಿ ಸಂಬಂಧಿಸಿದ ಸಾರಿಗೆ ಕಚೇರಿಗೆ ಭೇಟಿ ನೀಡಿ, ನಗದು ಕೌಂಟರ್‌ನಲ್ಲಿ ದಂಡದ ಮೊತ್ತವನ್ನು ಪಾವತಿಸಿ ಅಧಿಕೃತ ರಸೀದಿ ಪಡೆದು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಬಹುದು. ವಾಹನ ಮಾಲೀಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
