ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಿಂದ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ರಕ್ಷಣೆ ಹಾಗೂ ನೆರವಿಗಾಗಿ ವೃದ್ಧಾಶ್ರಮಗಳನ್ನು ನಡೆಸಲು ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ರಸ್ತೆ, ವಿಜಯಪುರ ಕಚೇರಿಯಿಂದ ಜೂನ್ ೨೫ರವರೆಗೆ ಅರ್ಜಿ ಸಮಾಜ ಕಲ್ಯಾಣ ಇಲಖೆಯ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಸಹಿತ ಜೂನ್ ೩೦ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ,ವಿಜಯಪುರ ಇವರ ಕಚೆರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
