Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಾಂಡ್ (ನೋಟರಿ) ಮೂಲಕ ಖರೀದಿಸಿದ ಭಕ್ಷೀಸ್ ಪತ್ರಗಳು, ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿತ ಗುಂಟಾ ಪ್ಲಾಟ್‌ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ ಮತ್ತು ವಾಣಿಜ್ಯ ವಿದ್ಯುತ್ ಸಂಪರ್ಕ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ ಯಾಸೀನ್ ಎಲ್. ಗುಲ್ಬರ್ಗಾ ಮಾತನಾಡಿ, 03-07-2025 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 1200 ಚದರ ಅಡಿ ವರೆಗಿನ ಕಟ್ಟಡಗಳಿಗೆ ಓಸಿ ಹಾಗೂ ಸಿಸಿ ಪಡೆಯುವುದರಿಂದ ವಿನಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ಆದೇಶಗಳನ್ನು ಉಲ್ಲಂಘಿಸಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಮಂಜೂರು ಮಾಡುವಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಗುಂಟಾ ಪ್ಲಾಟ್‌ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ ಹಾಗೂ ವಾಣಿಜ್ಯ ವಿದ್ಯುತ್ ಸಂಪರ್ಕ ಕಲ್ಪಿಸದೇ ಇರುವುದರ ವಿರುದ್ಧ ಹಾಗೂ ವಿದ್ಯುತ್ ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಸ್ಕಾಂ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದೊಡ್ಡಪ್ಪ ಮೂಲಿಮನಿ ಹಾಗೂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಕ್ಷರಬಾಶಾ ಕುರಿ ಅವರ ಕಾರ್ಯವೈಖರಿಯನ್ನು ಸಂಘ ಪದಾಧಿಕಾರಿಗಳು ಖಂಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಗ್ರಾಹಕರು ಹಾಗೂ ವಿವಿಧ ರೈತ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.