ಉದಯರಶ್ಮಿ ದಿನಪತ್ರಿಕೆ
ಆಲಮೆಲ: ಪಟ್ಟಣದ ಪೋಲಿಸ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
ಪಿ ಎಸ್ ಐ ಅರವಿಂದ ಅಂಗಡಿ ಅವರು ಅದ್ಯಕ್ಷತೆ ವಹಿಸಿ ಮಾತನಾಡಿ, ಮೊಹರಂ ಹಬ್ಬವನ್ನು ಹಿಂದು ಮುಸ್ಲಿಂ ಸಹೋದರರು ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಪರಿಪಾಲನೆ ಮಾಡಿ, ಸಹೋದರತ್ವ, ಸಹಬಾಳ್ವೆಯಿಂದ ಆಚರಿಸಿ ಎಂದು ಹೇಳಿದರು.
ಗ್ರಾಮದ ಗಣ್ಯರಾದ ರಮೇಶ ಬಂಟನೂರ, ಹರೀಶ ಎಂಟಮನ, ಮೂಹರಂ ಆಚರಣೆ ಮಾಡುವ ಮಾಹಿತಿಯನ್ನು ಸಭೆಗೆ ತಿಳಿಸಿದರು.
ಪಟ್ಟಣದಲ್ಲಿ ವಿವಿದ ಸ್ಥಳದಲ್ಲಿ ದೇವರ ಸ್ಥಾಪನೆ ನಡೆಯುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು ೩೬ ಸ್ಥಳಗಳಲ್ಲಿ ದೇವರ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.
ವಿವಿದ ಗ್ರಾಮದ ಗಣ್ಯರು, ಗ್ರಾಮಸ್ಥರು, ಪೋಲಿಸ್ ಸಿಬ್ಬಂದಿ ಇದ್ದರು

