ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕಾರ್ಯಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ಹಾಗೂ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತಾಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ನೋಡಲ್ ಅಧಿಕಾರಿ, ಡಿಡಿಪಿಐ ಮೊ: ೯೧೧೦೮೩೯೭೦೧,ವಿಜಯಪುರ ನಗರ ಬಿಇಒ ಅವರನ್ನು ತಾಲೂಕು ನೋಡಲ್ ಅಧಿಕಾರಿಯನ್ನಾಗಿ ವಿಜಯಪುರ ನಗರಕ್ಕೆ ವಹಿಸಿಕೊಡಲಾಗಿದೆ.
ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಜಯಪುರ ಗ್ರಾಮೀಣ, ತಿಕೋಟಾ ಹಾಗೂ ಬಬಲೇಶ್ವರ ತಾಲೂಕು ವಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಬಸವನಬಾಗೇವಾಡಿ, ಕೊಲ್ಹಾರ ಹಾಗೂ ನಿಡಗುಂದಿ ತಾಲೂಕಾ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ನೋಡಲ್ ಅಧಿಕಾರಿಯಾದರೆ, ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಇಂಡಿ ವಹಿಸಿದರೆ, ಚಡಚಣ ಬಿಇಒಗೆ ಚಡಚಣ ತಾಲೂಕು ನೋಡಲ್ ಜವಾಬ್ದಾರಿ ನೀಡಲಾಗಿದೆ. ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಿಂದಗಿ, ದೇವರಹಿಪ್ಪರಗಿ ಮತ್ತು ಆಲಮೇಲ ತಾಲೂಕು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
