ವಿಜಯಪುರ: ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಲಾಗುವ ವಿಜಯಪುರ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಪ್ರಕಾಶ ಆರ್.ಚವ್ಹಾಣ, ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ, ಸಹಾಯಕ ಕೃಷಿ ನಿರ್ದೇಶಕ ಎಸ್.ಎ.ಇನಾಂದಾರ, ಕೃಷಿ ಅಧಿಕಾರಿ ಶ್ರೀಮತಿ ಜಯಪ್ರದಾ ದಶವಂತ, ಮಾಜಿ ತಾಲೂಕಾ ಪಂಚಾಯತ್ ಸದಸ್ಯರಾದ ರಾಮನಗೌಡ ಬಗಲಿ, ನಿಂಗಪ್ಪ ಪೂಜಾರಿ, ಸಿದ್ದು ಕಬಾಡಗಿ ಸೇರಿದಂತೆ ವಿಜಯಪುರ ತಾಲೂಕಿನ ವಿವಿಧ ರೈತರು ಉಪಸ್ಥಿತರಿದ್ದರು.
ಸಹಾಯಕ ಕೃಷಿ ನಿರ್ದೇಶಕ ಜಿ.ಎ.ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು.
Related Posts
Add A Comment