ಉದಯರಶ್ಮಿ ದಿನಪತ್ರಿಕೆ
ಇಂಡಿ: ಕೃಷ್ಣಾ ಬಾಗ್ಯ ಜಲ ನಿಗಮ ನಿಯಮಿತ ಮುಖ್ಯ ಕಚೇರಿ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣ ಕಾಲುವೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಭಾಗವಹಿಸಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಸಭೆಯಲ್ಲಿ ಕಾಮಗಾರಿಗಳ ಗುಣಮಟ್ಟ ಕಾರ್ಯಗತಗೊಳಿಸುವ ವೇಗ ರೈತರಿಗೆ ದೊರೆಯಲಿರುವ ಪ್ರಯೋಜನಗಳು ಹಾಗೂ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೈಕೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಪರಿಶೀಲಿಸಲಾಯಿತು. ನೀರಾವರಿ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ರೈತರ ಹೊಲಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯಾವದೇ ನಿರ್ಲಕ್ಷ ವಹಿಸದೇ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಯಶವಂತರಾಯಗೌಡರು ಸೂಚನೆ ನೀಡಿದರು.
ಹೋರ್ತಿ ರೇವನಸಿದ್ದೇಶ್ವರ ಯೋಜನೆ ಹಾಗೂ ತಿಡಗುಂದಿ ವಿಸ್ತರಣಾ ಕಾಲುವೆ ಕಾಮಗಾರಿಗಳು ಪೂರ್ಣಗೊಂಡಲ್ಲಿ ಇಂಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ರೈತರಿಗೆ ಮಹತ್ತರ ಅನುಕೂಲವಾಗಲಿದ್ದು ಕೃಷಿ ಉತ್ಪಾದನೆ ಹೆಚ್ಚಳದೊಂದಿಗೆ ರೈತರ ಅರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಶಾಸಕರು ತಿಳಿಸಿದರು.
ಈ ಯೋಜನೆಗಳು ಪ್ರದೇಶದ ಸಮಗ್ರ ಅಭಿವೃದ್ದಿಗೆ ಹೊಸ ದಿಕ್ಕು ನೀಡಲಿವೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
ಕೆಬಿಜೆಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣೀ, ಆಲಮಟ್ಟಿ ಮುಖ್ಯ ಅಭಿಯಂತರ ಬಸವರಾಜ, ಅಧಿಕ್ಷಕ ಅಭಿಯಂತರ ಗೋವಿಂದ ರಾಠೋಡ, ಮತ್ತಿತರಿದ್ದರು.

