ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ೧ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ) ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ.
ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ೧ರಿಂದ ೮ನೇ ತರಗತಿ ವಿದ್ಯಾರ್ಥಿವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟಲ್ https://ssp.postmatric.karnataka.gov.in/ssppre ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು.
೨೦೨೫-೨೬ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ಅನುಮೋದನೆಗೊಂಡು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳ ಅರ್ಜಿಗಳನ್ನು ಆಟೋ ರಿನ್ಯೂವಲ್ ಎಂದು ಪರಿಗಣಿಸಲಾಗುವುದರಿಂದ ಅವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ, ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೧ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಸಕ್ರಿಯವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಯೋಜನೆಯ ಅನುಷ್ಠಾನವು ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.
iಟಿ ವೆಬ್‌ಸೈಟ್‌ನಲ್ಲಿ ಹಾಗೂ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆ ತಿಳಿಸಿದೆ.
