ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ನಾಲ್ಕು ವರ್ಷಗಳ ಎಂಟು ಸೆಮಿಸ್ಟರಿನ ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್’ (ಬಿ.ವಿ.ಎ) ಪ್ರಥಮ ವರ್ಷದ ಪದವಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್ಗಳಲ್ಲಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್೨೨ರೊಳಗಾಗಿhttps://uucms.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಪ್ರವೇಶಾತಿಯಡಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನ ನಡೆಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ ೨೩ ರಂದು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
